ಕೆಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ

ಪ್ರಮುಖವಾಗಿ ಉತ್ತರ ಕರ್ನಾಟಕದ 30 ಹಾಗೂ ಮಧ್ಯಕರ್ನಾಟಕದ 10 ಮತ್ತು ಮೈಸೂರು ಭಾಗದ 10 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದ್ದಾರೆ. ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಗುಲ್ಬರ್ಗಾ, ಬೀದರ್, ತುಮಕೂರು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಂಭವನೀಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ರಣಕಹಳೆ ಮೊಳಗಿಸಿದ್ದಾರೆ.
ಈ ಸಂಬಂಧ ಕಳೆದ ಎರಡು ದಿನಗಳಿಂದ ತಮ್ಮ ನಿವಾಸದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿರುವ ಅವರು, ಅಭ್ಯರ್ಥಿಯ ಹಿನ್ನೆಲೆ, ಜಾತಿ, ಕ್ಷೇತ್ರದಲ್ಲಿ ಹೊಂದಿರುವ ವರ್ಚಸ್ಸು, ಸಂಘಟನಾ ಸಾಮರ್ಥ್ಯ, ಪೂರ್ವಪರ ಹಿನ್ನೆಲೆ ಆಧಾರದ ಮೇಲೆಯೇ ಅಭ್ಯರ್ಥಿಗಳನ್ನು ಆಯ್ಕೆಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ಎದುರಾಗಬಹುದು ಎಂಬುದನ್ನು ಅರಿತಿರುವ ಬಿಎಸ್‌ವೈ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಕ್ಷ ಸಂಘಟಿಸುವತ್ತ ತಾಲೀಮು ಆರಂಭಿಸಿದ್ದಾರೆ.
ಒಂದು ಕೋಮಿನ ಮತದಾರರು ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿರುವುದು ಪಕ್ಷದ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ. ಟಿಕೆಟ್ ತಮಗೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಪಕ್ಷದಲ್ಲಿ ಭಿನ್ನಮತಕ್ಕೆ ಅವಕಾಶ ನೀಡಬಾರದೆಂದು ಎಚ್ಚರ ವಹಿಸಿರುವ ಯಡಿಯೂರಪ್ಪ ಕ್ಷೇತ್ರವಾರು ಮುಖಂಡರ ಸಭೆ ನಡೆಸುತ್ತಿದ್ದಾರೆ.
ಪಟ್ಟು ಹಿಡಿದಿರುವ ಅಭ್ಯರ್ಥಿಗಳನ್ನು ಮನವೊಲಿಸಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ. ಈ ತಿಂಗಳ 20ರೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದು, ಹಂತ ಹಂತವಾಗಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಜೆಪಿ ತೀರ್ಮಾನಿಸಿದೆ.












Click it and Unblock the Notifications