ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್

208 urban local bodies in Karnataka.
ಬೆಂಗಳೂರು, ಫೆ. 14: ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ರಾಜ್ಯದ 208 ಸ್ಥಳೀಯ ಸಂಸ್ಥಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸುತ್ತಿರುವುದಾಗಿ ರಾಜ್ಯ ಚುನಾವಣಾ ಆಯುಕ್ತ ಸಿ.ಆರ್.ಚಿಕ್ಕಮಠ್ ಹೇಳಿದ್ದಾರೆ.

ಮಾರ್ಚ್ 7, ಗುರುವಾರದಂದು 208 ಸ್ಥಳೀಯ ಸಂಸ್ಥೆಗಳಿಗೆ ಮತ್ತು 7 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದ್ದು, ಮಾ.11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಫೆ.15 ರಿಂದ ಚುನಾವಣೆ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಫೆ.23 ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ಫೆ.25ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಫೆ.27 ವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶ ನೀಡಲಾಗಿದೆ. 2007ರ ಮೀಸಲಾತಿ ಪಟ್ಟಿಯಂತೆ 93 ಪುರಸಭೆ, 43 ನಗರ ಸಭೆ, 65 ಪಟ್ಟಣ ಪಂಚಾಯತ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತು ಪಡಿಸಿ, ಉಳಿದ 7 ಮಹಾನಗರ ಪಾಲಿಕೆಗಳಿಗೆ ( ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಗುಲ್ಬರ್ಗ, ದಾವಣಗೆರೆ, ಬಳ್ಳಾರಿ) ಚುನಾವಣೆ ನಡೆಯಲಿದೆ.

ಮತದಾನಕ್ಕಾಗಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆಮಾಡಲಾಗುವುದು ಎಂದು ತಿಳಿಸಿದ ಅವರು, 10,482 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಪ್ರತಿಕ್ರಿಯೆ

ಮೇ ತಿಂಗಳಿನಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಇದಕ್ಕಿಂತ ಮೊದಲು ನಡೆಯವುದರಿಂದ, ಇದು ಪಕ್ಷಗಳಿಗೆ ಸೆಮಿಫೈನಲ್ ಪಂದ್ಯ ವಾಗುತ್ತದೆ. 2011ರ ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸಿದ್ದರೆ, ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ದೊರಕುತ್ತಿತ್ತು.
ಕೆಪಿಸಿಸಿ ಅಧ್ಯಕ್ಷ
ಡಾ.ಜಿ.ಪರಮೇಶ್ವರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+