ಬಿಎಸ್ವೈ ಬಗ್ಗೆ ಕೊನೆಗೂ ಬಾಯ್ಬಿಟ್ಟ ಬಿಜೆಪಿ ರಾಷ್ಟ್ರಾಧ್ಯಕ್ಷ

ಯಡಿಯೂರಪ್ಪ ಒಬ್ಬ ಮಾಸ್ ನಾಯಕ. ಅವರ ನಾಯಕತ್ವ ಇಲ್ಲದೆ ಚುನಾವಣೆಗೆ ಮತದಾರರ ಮುಂದೆ ಹೋಗುವುದು ಬಿಜೆಪಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಒಪ್ಪಿಕೊಂಡಿದ್ದಾರೆ.
ಆದರೆ ನಮ್ಮದು ರಾಷ್ಟ್ರೀಯ ಪಕ್ಷ. ಇರುವ ಅಡೆತಡೆಗಳನ್ನು ಸಮರ್ಥವಾಗಿ ಎದುರಿಸಿ ಚುನಾವಣೆಗೆ ಹೋಗುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರ ರಚಿಸಲಿದ್ದೇವೆ ಎಂದು ರಾಜನಾಥ್ ಸಿಂಗ್ ಭರವಸೆಯ ಮಾತನ್ನಾಡಿದ್ದಾರೆ.
ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಸೂಕ್ತ ಕಾರ್ಯತಂತ್ರ ರೂಪಿಸಿ, ನಮ್ಮ ಸರಕಾರದ ಅವಧಿಯಲ್ಲಾದ ಜನಪರ ಕೆಲಸದ ಮೂಲಕ ಜನತೆಯ ಮುಂದೆ ಹೋಗುತ್ತೇವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೊದಲು ಕಾರ್ಯಕರ್ತರ ಜೊತೆ ಸಮಲೋಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು.
ಬಿಜೆಪಿ ಮತಗಳು ವಿಭಜನೆಯಾಗಲಿವೆ ಎನ್ನುವ ಮಾತಿಗೆ ನನ್ನ ಸಹಮತವಿಲ್ಲ. ನಮ್ಮದು ಜನಪರ ಸರಕಾರ, ಅಭಿವೃದ್ದಿಯೇ ನಮ್ಮ ಮೂಲ ಮಂತ್ರ. ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರಕಾರದ ಸಾಲುಸಾಲು ಹಗರಣಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಯುಪಿಎಗೆ ಸೂಕ್ತ ಬುದ್ದಿ ಕಲಿಸಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.












Click it and Unblock the Notifications