ಬಿಜೆಪಿಗೆ ಟಾಟಾ ಮರಳಿ ತವರಿಗೆ ಯೋಗೇಶ್ವರ್

ಬಿಜೆಪಿ ತೊರೆಯಲು ಚಿಂತನೆ ನಡೆಸಿದ್ದೇನೆ. ಕಾಂಗ್ರೆಸ್ ನಾಯಕರ ಜೊತೆ ಪಕ್ಷ ಸೇರುವ ಕುರಿತು ಮಾತುಕತೆ ನಡೆಸಲಾಗಿದೆ. ಎರಡು ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತೃಪಕ್ಷ ಕಾಂಗ್ರೆಸ್ ಸೇರುವುದಾಗಿ ಸಿ.ಪಿ.ಯೋಗೇಶ್ವರ್ ಹೇಳಿದರು.
ನಾಲ್ಕು ಜನ ಬಿಜೆಪಿ ಸಚಿವರು ಕಾಂಗ್ರೆಸ್ ಕದ ತಟ್ಟಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ಬಹಳ ದಿನಗಳಿಂದ ಹರಿದಾಡುತ್ತಿತ್ತು. ಸೋಮವಾರ ಫೆ.18 ರಂದು ನವದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ನಾಲ್ವರು ಸಚಿವರ ಸೇರ್ಪಡೆ ಬಗ್ಗೆ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು.
ಹೈಕಮಾಂಡ್ ಸಹ ನಾಯಕರ ಸೇರ್ಪಡೆಗೆ ಸಮ್ಮತಿ ಸೂಚಿಸಿದೆ ಎಂದು ತಿಳಿದು ಬಂದಿದೆ. ದೆಹಲಿಯಿಂದ ಅಧಿಕೃತ ಮಾಹಿತಿ ಬಂದ ಬಳಿಕವೇ ಸಿ.ಪಿ.ಯೋಗೇಶ್ವರ್ ಬಿಜೆಪಿ ತೊರೆಯುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿರುವ ಬಿಜೆಪಿಯ ಇನ್ನೂ ಮೂವರು ಸಚಿವರು ಕೆಲವೆ ದಿನಗಳಲ್ಲಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭೆ ಚುನಾವಣೆಯ ತಯಾರಿಯಲ್ಲಿ ತೊಡಗಿರುವ ಬಿಜೆಪಿಗೆ ಈ ರಾಜೀನಾಮೆಗಳು ಮತ್ತಷ್ಟು ತಲೆನೋವು ತಂದೊಡ್ಡಲಿವೆ.
ಕಾಂಗ್ರೆಸ್ ಸೇರಬಹುದಾದ ಸಾಂಭವ್ಯ ಬಿಜೆಪಿ ನಾಯಕರು : ಸಚಿವರಾದ ರಾಜೂಗೌಡ, ಆನಂದ್ ಆಸ್ನೋಟಿಕರ್, ವಿ.ಸೋಮಣ್ಣ, ಶಾಸಕರಾದ ಪ್ರತಾಪಗೌಡ ಪಾಟೀಲ್ ಮತ್ತು ಸುರೇಶ್ ಗೌಡ.












Click it and Unblock the Notifications