ಯಡಿಯೂರಪ್ಪ, ಕುಮಾರಸ್ವಾಮಿಗೆ ಹೈಕೋರ್ಟ್ ನೋಟಿಸ್

ಗುರುವಾರ( ಫೆ.21) ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಕೆ.ಶ್ರೀಧರ್‌ರಾವ್ ಅವರನ್ನೊಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿದೆ.
ರಾಜ್ಯದಲ್ಲಿ 2007ರಿಂದ 2012ರ ಅವಧಿಯಲ್ಲಿ ಒಟ್ಟು 129 ಡಿ- ನೋಟಿಫಿಕೇಷನ್ ಪ್ರಕರಣಗಳು ನಡೆದಿವೆ ಎಂದು ಸಿಎಜಿ ವರದಿ ನೀಡಿದೆ. ಆದರೂ, ರಾಜ್ಯ ಸರ್ಕಾರ ವರದಿ ಆಧಾರಿಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಕೋರ್ಟ್ ಗಮನ ಸೆಳೆದಿದ್ದಾರೆ. ಸರ್ಕಾರ ಮುಂದೆಯೂ ಕ್ರಮ ಕೈಗೊಳ್ಳಲಿದೆ ಎಂಬ ನಂಬಿಕೆಯಿಲ್ಲ. ಈ ಹಿನ್ನೆಲೆಯಲ್ಲಿ ಡಿ-ನೋಟಿಫಿಕೆಷನ್ ಹಗರಣಗಳನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಡಿ-ನೋಟಿಫಿಕೆಷನ್‌ನಲ್ಲಿ ನಡೆದಿರುವ ಅವ್ಯವಹಾರಗಳ ವಿವರಣೆ ಇರುವ ಸಿಎಜಿ ವರದಿಯನ್ನು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಳಗಾವಿಯಲ್ಲಿ ನಡೆದ ಅಧಿವೇಶನಲ್ಲಿ ಮಂಡಿಸಿದ್ದರು. ಅದನ್ನು ಆಧರಿಸಿಯೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ.
ವಿವರಣೆ ನೀಡುವಂತೆ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಸಿಬಿಐಗೆ ನೋಟಿಸ್ ರವಾನಿಸಿದೆ.
ಡಿ-ನೋಟಿಫಿಕೆಷನ್ ಹಗರಣಗಳ ಕುರಿತು ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ.












Click it and Unblock the Notifications