ದೆಹಲಿಗೆ ಡಿವಿ ಸದಾನಂದ, ಮತ್ತೆ ರಾಜ್ಯಾಧ್ಯಕ್ಷ ಪಟ್ಟ?

ಮೂಲ ಕಾರ್ಯಕರ್ತರನ್ನು ಕಡೆಗಣಿಸಿ ಅನ್ಯರಿಗೆ ಮಣೆ ಹಾಕಿದ್ದರಿಂದ ಇಂದು ಇಂತಹ ಪರಿಸ್ಥಿತಿ ಬಂದಿದೆ. ಮುಖ್ಯಮಂತ್ರಿ ಗಟ್ಟಿ ನಿರ್ಧಾರ ಕೈಗೊಳ್ಳದಿದ್ದುದೇ ಇದಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣವನ್ನು ವ್ಯಾಪಾರ ಎಂದು ತಿಳಿದುಕೊಂಡಿರುವವರಿಗೆ ಯಾವ ಪಕ್ಷಗಳೂ ಟಿಕೆಟ್ ನೀಡಬಾರದು, ಮತದಾರರು ಕೂಡ ಇಂಥವರ ಬಗ್ಗೆ ಜಾಗೃತಿಯಿಂದಿರಬೇಕೆಂದು ಪರೋಕ್ಷವಾಗಿ ಬಿಜೆಪಿ ಬಿಡಲು ಮುಂದಾಗಿರುವ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಸಣ್ಣ ಕೈಗಾರಿಕೆಗಳ ಸಚಿವ ರಾಜುಗೌಡ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮೂಲ ಕಾರ್ಯಕರ್ತರು ಹಾಗೂ ಹೊಸಬರಿಗೆ ಆದ್ಯತೆ ನೀಡಬೇಕಾದ ಅಗತ್ಯವಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ಹಿರಿಯ ನಾಯಕರು ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದರು.
ರಾಜ್ಯಾಧ್ಯಕ್ಷ ಪಟ್ಟ ಗ್ಯಾರಂಟಿ?: ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಡಿವಿಎಸ್, ಒಂದು ವೇಳೆ ಪಕ್ಷದ ವರಿಷ್ಠರು ತಮ್ಮನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಅದನ್ನು ಸವಾಲಾಗಿ ತೆಗೆದುಕೊಳ್ಳಲು ಸಿದ್ಧನಿದ್ದೇನೆ. ಈ ಹಿಂದೆ ಪಕ್ಷದ ಅಧ್ಯಕ್ಷನಾಗಿ ಮುನ್ನಡೆಸಿದ ಅನುಭವವೂ ನನಗಿದೆ. ಅಲ್ಲದೆ, ನಾನೇ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು ಎಂದು ಹೇಳಿದರು.
ವರಿಷ್ಠರು ತೆಗೆದುಕೊಂಡ ತೀರ್ಮಾನಕ್ಕೆ ನಾನೂ ಸೇರಿದಂತೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಮುಖಂಡ ಅನಂತ್‌ಕುಮಾರ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಅರುಣ್‌ಜೇಟ್ಲಿ ಮತ್ತಿತರರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದರು.
ವರಿಷ್ಠರು ತೆಗೆದುಕೊಂಡ ತೀರ್ಮಾನಕ್ಕೆ ನಾನೂ ಸೇರಿದಂತೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಮುಖಂಡ ಅನಂತ್‌ಕುಮಾರ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು. ಅವರನ್ನು ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.
ಇತ್ತೀಚೆಗೆ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ನಡೆಸಲಾದ ಸಭೆಗೆ ಸದಾನಂದ ಗೌಡ ಗೈರು ಹಾಜರಾಗಿದ್ದರು. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ, ಬಿಜೆಪಿ ಬಿಟ್ಟು ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಯನ್ನು ಕೆಜೆಪಿ ಕಡೆಯವರು ಹಬ್ಬಿಸಿದ್ದರು. ಆದರೆ, ಬಿಜೆಪಿ ತೊರೆಯುವ ಮಾತೇ ಇಲ್ಲ ಎಂದು ಡಿವಿಎಸ್ ಸ್ಪಷ್ಟಪಡಿಸಿದ್ದರು.
ಧನಂಜಯಕುಮಾರ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಸದಾನಂದಗೌಡ ಅವರು ಸಾಕಷ್ಟು ಕಪಿಚೇಷ್ಟೆ ಮಾಡುತ್ತಿರುತ್ತಾರೆ. ಹಿಂದೆ ಕುಚೇಷ್ಟೆ ಮಾಡುತ್ತಿದ್ದರು ಈಗ ಕಪಿಚೇಷ್ಟೆ ಮಾಡುತ್ತಿದ್ದಾರೆ. ಅಂಥವರ ಹೇಳಿಕೆಗಳಿಗೆ ಯಾವುದೇ ಮಹತ್ವ ಬೇಡ ತಮ್ಮ ಮೇಲೆ ಹಳೆ ಕೋಪ ಇದೆ ಅವರಿಗೆ ಎಂದರು.












Click it and Unblock the Notifications