ಗಣ್ಯರ ಹತ್ಯೆಗೆ ಸಂಚು-ನ್ಯಾಯಾಲಯಕ್ಕೆ ಚಾರ್ಜ್ ಶೀಟ್

ಡಿಆರ್ ಡಿಓದಲ್ಲಿ ಸಂಶೋಧಕರಾಗಿ ಕೆಲಸ ಕಾರ್ಯನಿರ್ವಹಿಸುತ್ತಿದ್ದ ಇಲಾಜ್ ಮಹಮದ್ ಮಿರ್ಜಾ, ಪತ್ರಕರ್ತ ರೆಹೆಮಾನ್ ಸಿದ್ದಿಕಿ, ಸಯ್ಯದ್ ತಜೀಮ್, ಯೂಸೂಫ್ ನಲಾಬಾಂದ್ ಮತ್ತು ಮತಿ ಉರ್ ರೆಹಮಾನ್ ವಿರುದ್ಧ ಯಾವುದೇ ಆರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಎರಡು ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಮತ್ತು ಗಣ್ಯರ ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದ ಹತ್ತು ಮಂದಿ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸುವ ಸಂದರ್ಭದಲ್ಲಿ ಉಳಿದ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.
2012ರ ಆಗಸ್ಟ್ ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೋಯ್ಬಾ ಹಾಗೂ ಹರ್ಕತ್ ವುಲ್ ಜಿಹಾದ್ ಸಂಘಟನೆಗಳ ಮುಖಂಡರ ಸೂಚನೆ ಮೇರೆಗೆ ದೇಶದಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರು, ಪತ್ರಕರ್ತರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಆರೋಪ ಪಟ್ಟಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರದ ಪ್ರಮುಖ ರಾಜಕಾರಣಿಗಳನ್ನು ಮತ್ತು ಕರ್ನಾಟಕದ ಕೆಲವು ಪತ್ರಕರ್ತರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ, 2012ರ ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯದ ಬೆಂಗಳೂರು, ಹುಬ್ಬಳ್ಳಿ ಮುಂತಾದ ಸ್ಥಳಗಳಲ್ಲಿ 15 ಜನ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿತ್ತು.












Click it and Unblock the Notifications