ಅತ್ಯಾಚಾರ ಆರೋಪ-ಬಿಎಸ್ಆರ್ ಮುಖಂಡ ಬಂಧನ

BSR Congress State
ತುಮಕೂರು, ಫೆ.23: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಬಿ.ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ರನ್ನು ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆರೋಪ ಕೇಳಿಬಂದ ತಕ್ಷಣ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಬಿಎಸ್ಆರ್ ಕಾಂಗ್ರೆಸ್ ಆದೇಶ ಹೊರಡಿಸಿದೆ.

ವೆಂಕಟೇಶ್ ಅಲಿಯಾಸ್ ಬೂದಿಬೆಟ್ಟ ವೆಂಕಟೇಶ್ ಮೂಲತಃ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನವರು. ಆದರೆ, ಬೆಂಗಳೂರಿನ ಪೀಣ್ಯದಲ್ಲಿ ವಾಸಿಸುತ್ತಿದ್ದಾರೆ. ಪೀಣ್ಯದ ನಿವಾಸಿಯಾದ ವೇದಾವತಿಯವರನ್ನು ವಿವಾಹವಾಗಿ ಇಲ್ಲೇ ನೆಲೆಸಿ, ಬಿಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

ಶುಕ್ರವಾರ ಸಂಜೆ ವೆಂಕಟೇಶ್ ಪತ್ನಿ ವೇದಾವತಿ ಪೀಣ್ಯ ಪೊಲೀಸರಿಗೆ ದೂರು ನೀಡಿ. ನಾನು ಮನೆಯಲ್ಲಿ ಇಲ್ಲದ ಸಮಯದಲ್ಲಿ ಮಗಳ ಮೇಲೆ ವೆಂಕಟೇಶ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನ ಅನ್ವಯ ಕ್ರಮ ಕೈಗೊಂಡಿರುವ ಪೊಲೀಸರು ಪಾವಗಡದಲ್ಲಿದ್ದ ವೆಂಕಟೇಶ್ ರನ್ನ ಬಂಧಿಸಿ ಬೆಂಗಳೂರಿಗೆ ಹೆಚ್ಚಿನ ವಿಚಾರಣೆಗಾಗಿ ಕರೆತಂದಿದ್ದಾರೆ.

ಪ್ರಕರಣದ ಪ್ರಾಥಮಿಕ ತನಖೆ ಮತ್ತು ವೈದ್ಯಕೀಯ ಪರೀಕ್ಷೆಗಳ ನಂತರ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ. ಪಕ್ಷದ ಮುಖಂಡನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದ ತಕ್ಷಣ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿರುವುದಾಗಿ ಬಿಎಸ್ಆರ್ ಕಾಂಗ್ರೆಸ್ ಪ್ರಕಟಿಸಿದೆ.

ಪಾವಗಡದ ಟಿಕೆಟ್ ಆಕಾಂಕ್ಷಿ : ಬಿಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಪ್ರಧಾನ ಕಾರ್ದರ್ಶಿಯಾಗಿದ್ದ ವೆಂಕಟೇಶ್ ಪಾವಗಡ ತಾಲೂಕಿನಿಂದ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ತಾಲ್ಲೂಕಿನಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದರು. ಪಾವಗಡದ ಟೀಚರ್ಸ್ ಕಾಲೋನಿಯಲ್ಲಿ ಪಕ್ಷದ ಕಚೇರಿಗಾಗಿ ಬಾಡಿಗೆ ಮನೆಯನ್ನು ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+