ಅಂಬೇಡ್ಕರ್ ಪ್ರತಿಮೆ ತಾತ್ಕಾಲಿಕ ಸ್ಥಳಾಂತರಕ್ಕೆ ಆದೇಶ

Ambedkar
ಬೆಂಗಳೂರು, ಫೆ. 25 : ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮದ ನಡುವಿನ ಜಟಾಪಟಿಗೆ ಕಾರಣವಾಗಿದ್ದ ವಿಧಾನಸೌಧದ ಮುಂಭಾಗದ ಡಾ. ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರ ಮಾಡುವಂತೆ ಹೈಕೋರ್ಟ್ ಬಿಎಂಆರ್ ಸಿಎಲ್ ಗೆ ಆದೇಶಿಸಿದೆ. ಎರಡು ತಿಂಗಳೊಳಗೆ ಕಾಮಗಾರಿ ಮುಗಿಸಿ ನಂತರ ಪ್ರತಿಮೆಯನ್ನು ಅಲ್ಲೇ ಪ್ರತಿಷ್ಠಾಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ಡಾ.ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಿಸುವಂತೆ ಕೋರಿ ವಕೀಲ ಎ.ವಿ.ಅಮರನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ.ಶ್ರೀಧರರಾವ್ ಮತ್ತು ಅಬ್ದುಲ್ ನಜೀರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ತಿಂಗಳ ಅವಧಿಗೆ ಪ್ರತಿಮೆಯನ್ನು ವಿಧಾನಸೌಧದ ಆವರಣಕ್ಕೆ ಸ್ಥಳಾಂತರ ಮಾಡುವಂತೆ ಸೂಚಿಸಿತು.

ನಮ್ಮ ಮೆಟ್ರೋ ಯೋಜನೆಯ ಸುರಂಗ ಮಾರ್ಗ ಕಾಮಗಾರಿ ಮುಗಿದಿದೆ. ಆದ್ದರಿಂದ ಪ್ರತಿಮೆ ಸ್ಥಳಾಂತರ ಮಾಡುವ ಅಗತ್ಯವಿಲ್ಲ ಎಂದು ವಿವಿಧ ದಲಿತ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ಸಮಯದಲ್ಲಿ ವಜಾಗೊಳಿಸಿತು. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರದಿಂದ ಮೆಟ್ರೋ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಇದು ಪ್ರತಿಮೆಯ ಶಾಶ್ವತ ಸ್ಥಳಾಂತರವಲ್ಲ. ತಾತ್ಕಾಲಿಕವಾಗಿ ಎರಡು ತಿಂಗಳ ಮಟ್ಟಿಗೆ ಮಾತ್ರ ಪ್ರತಿಮೆಯನ್ನು ಸ್ಥಳಾಂತರ ಮಾಡಲಾಗುತ್ತದೆ ಎಂದು ಪೀಠ ಸ್ಪಷ್ಟ ಪಡಿಸಿತು. ಮೆಟ್ರೋ ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡರೆ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಹಾಗೂ ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+