ಚಿಕ್ಕಬಳ್ಳಾಪುರ : ರೈಲ್ವೆ ಇಲಾಖೆ ವಿರುದ್ಧ ಪ್ರತಿಭಟನೆ

ರಾಜ್ಯದ 208 ಸ್ಥಳೀಯ ಸಂಸ್ಥೆಗಳಿಗೆ ಮಾ.7ರಂದು ಚುನಾವಣೆ ನಡೆಯಲಿದೆ. ಆದರೆ, ಚಿಕ್ಕಬಳ್ಳಾಪುರದ ಚಾಮರಾಜಪೇಟೆ ಅಂಬೇಡ್ಕರ್ ನಗರದ ವಾರ್ಡ್ ಗೆ ಚುನಾವಣೆ ನಡೆಯುವುದಿಲ್ಲ. ವಾರ್ಡ್ ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲಾ 10 ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದು ರೈಲ್ವೆ ಇಲಾಖೆ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.
ಏನಿದು ಸಮಸ್ಯೆ : ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣ ಅಭಿವೃದ್ಧಿಗಾಗಿ ಇದಕ್ಕೆ ಹೊಂದಿಕೊಂಡಿದ್ದ ಚಾಮರಾಜಪೇಟೆ ಅಂಬೇಡ್ಕರ್ ನಗರದ ಜಾಗವನ್ನು ಬಳಸಿಕೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಅಲ್ಲಿ ವಾಸಿಸುವ ನಿವಾಸಿಗಳಿಗೆ ನೋಟೀಸ್ ಜಾರಿಗೊಳಿಸಿ ಜಾಗವನ್ನು ತೆರವುಗೊಳಿಸುಂವತೆ ಆದೇಶ ನೀಡಿತ್ತು.
ಆದರೆ, ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಮೌನ ವಹಿಸಿವೆ. ಇದರಿಂದಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ಪ್ರತಿಭಟನೆ ನಡೆಸುತ್ತೇವೆ ಹಾಗೂ ಜಾಗ ತೆರವುಗೊಳಿಸುವುದಿಲ್ಲ ಎಂದು ನಿವಾಸಿಗಳು ಹೇಳಿದ್ದಾರೆ.
ಸದ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರವಾಗಿರುವುದರಿಂದ ಅದನ್ನು ಬಳಸಿಕೊಂಡು ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಇಲ್ಲಿನ ನಿವಾಸಿಗಳು ತೀರ್ಮಾನಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ನಿವಾಸಿಗಳ ಬೆಂಬಲಕ್ಕೆ ನಿಂತಿದ್ದು, ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕು.
(ಕೇಂದ್ರ ರೈಲ್ವೆ ಬಜೆಟ್ ಮುಖ್ಯಾಂಶಗಳು)












Click it and Unblock the Notifications