ಕೋಲ್ಕತ್ತಾ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ 18 ಸಾವು

ಕೋಲ್ಕತ್ತಾ ವಿಶ್ವವಿದ್ಯಾಲಯ ಸಮೀಪವಿರುವ ಸುರ್ಜಾಸೇನ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 25 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ. ಇದುವರೆಗೂ 5 ಜನರನ್ನು ರಕ್ಷಿಸಲಾಗಿದ್ದು, ಕಟ್ಟಡದವೊಳಗೆ ಎಷ್ಟು ಜನರಿದ್ದಾರೆ ಎಂಬುದು ಇನ್ನೂ ಮಾಹಿತಿ ತಿಳಿದು ಬಂದಿಲ್ಲ.
ಕಟ್ಟಡದ ತುಂಬಾ ದಟ್ಟ ಹೊಗೆ ಆವರಿಸಿಕೊಂಡಿದ್ದು, ಹಲವಾರು ಜನರು ಉಸಿರಾಡಲು ಆಮ್ಲಜನಕದ ಕೊರತೆ ಉಂಟಾಗಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮಾರ್ಕೆಟ್ ನಲ್ಲಿ ಕಾಗದ, ಪ್ಲಾಸ್ಟಿಕ್ ಮುಂತಾದ ವಸ್ತುಗಳು ತುಂಬಿ ಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಕಟ್ಟಡದ ತುಂಬಾ ಹಬ್ಬಲು ಸಹಾಯಕವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಗಾಯಾಳುಗಳನ್ನು ಸವೀಪದ ಸ್ಥಳೀಯ ಆಸ್ಪತ್ರೆ ಮತ್ತು ಎನ್ ಆರ್ ಎಸ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ ಭಯಭೀತರಾಗಿ ಸುಮಾರು 30 ಜನರು ಕೆಳಗೆ ಧುಮುಕಿದ್ದು, ಕೆಲವರು ಈ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.












Click it and Unblock the Notifications