ಸಂಸದರೊಂದಿಗೆ ಸಭೆ ನಡೆಸಿದ ಸಿಎಂ ಶೆಟ್ಟರ್

ನಂತರ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ, ಕೇಂದ್ರ ಸರ್ಕಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಒತ್ತಡ ಹೇರಬೇಕು ಎಂದು ರಾಜ್ಯದ ಸಚಿವರು ಮತ್ತು ಸಂಸದರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ರಾಜ್ಯ ಬಜೆಟ್ ಅನ್ವಯ ನೂತನವಾಗಿ ಜಾರಿಗೊಳಿಸಬೇಕಾಗಿರುವ ಯೋಜನೆಗಳಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ನೀಡುವಂತೆ ಸಂಸದರಿಗೆ ಮಾಹಿತಿ ನೀಡಿದ್ದೇನೆ. ಕಾವೇರಿ ಐತೀರ್ಪು, ರೈಲ್ವೆ ಬಜೆಟ್ ನಲ್ಲಿ ರಾಜ್ಯ ಸರ್ಕಾರಕ್ಕಾಗಿರುವ ಅನ್ಯಾಯದ ಕುರಿತು ಸಮಾಲೋಚನೆ ನಡೆಸಿದ್ದೇವೆ ಎಂದರು.
ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಸಂಸದರು ಸರ್ಕಾರದ ಮೇಲೆ ಒತ್ತಡತಂದು ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸುವ ಭರವಸೆ ನೀಡಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾರಿಮನ್ ಭೇಟಿ : ಕಾವೇರಿ ನದಿ ನೀರಿನ ಅಧಿಸೂಚನೆ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಹಿರಿಯ ವಕೀಲ ನಾರಿಮನ್ ಅವರನ್ನು ಸಿಎಂ ಬುಧವಾರ ಸಂಜೆ ಭೇಟಿ ಮಾಡಲಿದ್ದಾರೆ.












Click it and Unblock the Notifications