ಶಾಸಕ ಮಾನಪ್ಪ ವಜ್ಜಲ್ ಬಿಜೆಪಿ ಬಿಡಲ್ಲ: ಶೆಟ್ಟರ್

ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದ ಲಿಂಗಸಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಮಂಗಳವಾರ(ಫೆ.26) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಮಾನಪ್ಪ ವಜ್ಜಲ್, ನಾರಾ ಯಣಪುರ ಎಡದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡುವ ಕುರಿತು ಮುಖ್ಯ ಮಂತ್ರಿಯೊಂದಿಗೆ ಚರ್ಚೆ ನಡೆಸಲಾಯಿತು. ಬೇರೆ ಯಾವುದೇ ರಾಜಕೀಯ ವಿಷಯಗಳ ಕುರಿತಲ್ಲ ಎಂದರು.
ಬಿಜೆಪಿಯನ್ನು ತೊರೆಯುವ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಕ್ಷೇತ್ರದ ಕಾರ್ಯಕರ್ತರು ಹಾಗೂ ಹಿತೈ ಷಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಎಂದು ಶಾಸಕ ಮಾನಪ್ಪ ಹೇಳಿದರು.
ಮಾನಪ್ಪ ವಜ್ಜಲ್ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸಿ, ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಆತುರದ ತೀರ್ಮಾನ ಕೈಗೊಳ್ಳದೆ, ಪಕ್ಷದಲ್ಲೆ ಉಳಿಯುವಂತೆ ಮುಖ್ಯಮಂತ್ರಿ ಅವರ ಮನವೊಲಿಸಿದ್ದಾರೆ
ನಾರಾಯಣಪುರ ಜಲಾಶಯದಿಂದ ರೈತರ ಜಮೀನುಗಳಿಗೆ ತಕ್ಷಣದಿಂದಲೇ ನೀರು ಹರಿಸಬೇಕು ಇಲ್ಲದಿದ್ದಲ್ಲಿ, ಎರಡು ದಿನಗಳೊಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾನಪ್ಪ ವಜ್ಜಲ್ ಹೇಳಿಕೆ ನೀಡಿದ್ದರು.
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ವ್ಯವಸಾಯ ಚಟುವಟಿಕೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ಸಂಗ್ರಹಿಸಲಾಗಿದೆ. ಈ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಮದಲ್ಲಿಟ್ಟುಕೊಂಡು ಫೆ.20ರವರೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆ ಜಾಲದಲ್ಲಿ ನೀರು ಹರಿಸಲಾಗಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಧಾನ ವ್ಯವಸ್ಥಾಪಕ (ಆಡಳಿತ)ರ ಪ್ರಕಟಣೆ ತಿಳಿಸಿದೆ.












Click it and Unblock the Notifications