ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

|
Google Oneindia Kannada News

Belgaum
ಬೆಳಗಾವಿ, ಫೆ.28 : ಸಂಸತ್ ಅಧಿವೇಶನದಲ್ಲಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮಹಿಳೆಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ಘೋಷಿಸಿರುವಾಗಲೇ, ಬೆಳಗಾವಿ ಜಿಲ್ಲೆಯಲ್ಲಿ ಮೂವರು ಕಾಮುಕರು ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಬಾವಿಗೆ ಎಸೆದಿದ್ದಾರೆ.

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ಯುವತಿಯನ್ನು (17) ಬಾವಿಯಿಂದ ಮೇಲೆತ್ತಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಆಗಮಿಸಿದ್ದು, ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿಸುತ್ತಿದ್ದಾರೆ. ಸ್ಥಳೀಯರ ಪ್ರಕಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬದವರಿಗೆ ಊಟ ನೀಡಲು ಯುವತಿ ತೆರಳುತ್ತಿದ್ದಳು ಎಂದು ತಿಳಿದು ಬಂದಿದೆ.

ಇದು ಸ್ಥಳೀಯರ ಕೃತ್ಯವಿರಬಹುದು ಎಂದು ಪೊಲೀಸರು ಅನುಮಾನಗೊಂಡಿದ್ದು, ಯುವತಿಯು ಹೊಲಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಅಪಹರಿಸಿದ ಮೂವರು ಅತ್ಯಾಚಾರವೆಸಗಿ ನಂತರ ಬಾವಿಗೆ ಎಸೆದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿ ಚೇತರಿಸಿಕೊಂಡ ಬಳಿಕೆ ಘಟನೆಯ ಸಂಪೂರ್ಣ ವಿವರಗಳು ಲಭ್ಯವಾಗಲಿದೆ.

English summary
Three unidentified people have gangraped a minor girl and thrown her into the well. The incident has taken place in Hitnal village in Raibhag taluk in Belgaum district. The 17-year-old girl's condition is said to be critical.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X