ಭರವಸೆಯಲ್ಲ ಬದ್ಧತೆ - ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ನಂತರ ಮಾತನಾಡಿದ ಅವರು, ಶೇ30ಕ್ಕೂ ಹೆಚ್ಚು ಜನರು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿಕೊಡಲು ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮಾತನಾಡಿ, 2008ರ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಚುನಾವಣೆಯಲ್ಲಿ ಜನರಿಂದ ಮತ ಕೇಳುವ ನೈತಿಕ ಹಕ್ಕನ್ನು ಬಿಜೆಪಿ ಕಳೆದು ಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕೆ ಬಂದರೆ, ನಗರ ಪ್ರದೇಶಗಳಲ್ಲಿ ಪ್ಲೋರೈಡ್ ರಹಿತ ಕುಡಿಯುವ ನೀರು ಪೂರೈಸಲಾಗುವುದು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರೀಪೈಯ್ಡ್ ಆಟೋ ಸೇವೆ, ತಾಜ್ಯ ವಿಲೇವಾರಿ, ಪೌರ ಕಾರ್ಮಿಕರಿಗೆ ವಿಮಾ ಸೌಲಭ್ಯ ಒದಗಿಸಲು ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ ಎಂದರು.
ಭರವಸೆಯಲ್ಲ ಬದ್ದತೆ ಪ್ರಣಾಳಿಕೆ ಮುಖ್ಯಾಂಶಗಳು
* ನಗರ ಪ್ರದೇಶದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಸ್ಥಾಪನೆ
* ನಗರ ಪ್ರದೇಶದ ಬಡ ಕುಟುಂಬಗಳಿಗೆ 30 ಕೆ.ಜಿ ಅಕ್ಕಿ, ಗೋಧಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಪೂರೈಕೆ.
* ಪೌರ ಕಾರ್ಮಿಕರಿಗೆ ವಿಮಾ ಸೌಲಭ್ಯ ಒದಗಿಸುವುದು.
* ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಪೌರ ಕಾರ್ಮಿಕರನ್ನು ಸೇರ್ಪಡೆಗೊಳಿಸುವುದು
* ಸಣ್ಣ ನಗರಗಳಲ್ಲಿ ಗುಂಪು ಸೋಲಾರ್ ಯೋಜನೆ ಪ್ರಾರಂಭ, ವಿದ್ಯುತ್ ಸಮಸ್ಯೆಗೆ ಮುಕ್ತಿ.
ಇತ್ತೀಚೆಗೆ ಆಡಳಿತಾರೂಢ ಬಿಜೆಪಿ ಪಕ್ಷ ಸಹ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಒಟ್ಟಾರೆ ಎಲ್ಲಾ ಪಕ್ಷಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿರುವುದಂತು ಸತ್ಯ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಂಭವವಿದೆ.












Click it and Unblock the Notifications