ಸಾಲುಮರದ ತಿಮ್ಮಕ್ಕ ಅಸ್ವಸ್ಥ - ಆಸ್ಪತ್ರೆಗೆ ದಾಖಲು
ಬೆಂಗಳೂರು,
ಮಾ.2 : ರಾಜ್ಯದಲ್ಲಿ ಸಾಲು ಮರಗಳನ್ನು ನೆಟ್ಟು ಹಸಿರು ಕ್ರಾಂತಿ ಮಾಡಿದ ಸಾಲುಮರದ ತಿಮ್ಮಕ್ಕ (84) ಅನಾರೋಗ್ಯದಿಂದ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳ ಕಾಲದ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. id="toptextpromo">ಮಾಗಡಿ
ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದವರಾದ 'ನಾಡೋಜ' ತಿಮ್ಮಕ್ಕ ಅವರಿಗೆ ಶುಕ್ರವಾರ ಸಂಜೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದೆ. ಶ್ವಾಸಕೋಶದಲ್ಲೂ ತೊಂದರೆ ಉಂಟಾಗಿ ಉಸಿರಾಟಕ್ಕೂ ಕಷ್ಟವಾಗಿದೆ. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ತಿಮ್ಮಕ್ಕ
ಅವರಿಗೆ ಯಾವುದೇ ತೊಂದರೆ ಇಲ್ಲ. ಸುಸ್ತು ಮತ್ತು ತೀವ್ರ ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ. ಎರಡು ಅಥವಾ ಮೂರು ದಿನಗಳ ಚಿಕಿತ್ಸೆ ನೀಡಿದರೆ ಚೇತರಿಸಿಕೊಳ್ಳಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.











Click it and Unblock the Notifications