ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲುಮರದ ತಿಮ್ಮಕ್ಕ ಅಸ್ವಸ್ಥ - ಆಸ್ಪತ್ರೆಗೆ ದಾಖಲು

|
Google Oneindia Kannada News

Thimmakka
ಬೆಂಗಳೂರು, ಮಾ.2 : ರಾಜ್ಯದಲ್ಲಿ ಸಾಲು ಮರಗಳನ್ನು ನೆಟ್ಟು ಹಸಿರು ಕ್ರಾಂತಿ ಮಾಡಿದ ಸಾಲುಮರದ ತಿಮ್ಮಕ್ಕ (84) ಅನಾರೋಗ್ಯದಿಂದ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳ ಕಾಲದ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮಾಗಡಿ ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದವರಾದ 'ನಾಡೋಜ' ತಿಮ್ಮಕ್ಕ ಅವರಿಗೆ ಶುಕ್ರವಾರ ಸಂಜೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದೆ. ಶ್ವಾಸಕೋಶದಲ್ಲೂ ತೊಂದರೆ ಉಂಟಾಗಿ ಉಸಿರಾಟಕ್ಕೂ ಕಷ್ಟವಾಗಿದೆ. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿಮ್ಮಕ್ಕ ಅವರಿಗೆ ಯಾವುದೇ ತೊಂದರೆ ಇಲ್ಲ. ಸುಸ್ತು ಮತ್ತು ತೀವ್ರ ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ. ಎರಡು ಅಥವಾ ಮೂರು ದಿನಗಳ ಚಿಕಿತ್ಸೆ ನೀಡಿದರೆ ಚೇತರಿಸಿಕೊಳ್ಳಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

English summary
Champion of the green cause Saalumarada Thimmakka has been admitted to Victoria Hospital in Bangalore on Friday, March 1. Thimmakka was suffering from fever and breathlessness. Doctors at the hospital said she is responding well to the treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X