13-14 ನಿಸ್ಸಂಶಯವಾಗಿ ಬಿಜೆಪಿಯ ವರ್ಷ- ಅನಂತ್

ಹುಬ್ಬಳ್ಳಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, ನಮ್ಮ ದೇಶಕ್ಕೆ ಸೋನಿಯಾಗಾಂಧಿ, ಸದಾ ಮೌನವಾಗಿರುವ ಮೌನಿಸಿಂಗ್ (ಮನಮೋಹನ್ ಸಿಂಗ್) ಅವರಂತಹ ನಾಯಕರು ಬೇಡ ಅಂತಹವರನ್ನು ತಿರಸ್ಕರಿಸಿ ಎಂದು ಜನತೆಗೆ ಕರೆ ನೀಡಿದರು.
ದೇಶದ ಅಭಿವೃದ್ಧಿಗಾಗಿ ನರೇಂದ್ರ ಮೋದಿ, ಎಲ್.ಕೆ.ಅಡ್ವಾಣಿಯಂತ ನಾಯಕರು ಬೇಕು. ನಾವು ಜನರೊಂದಿಗೆ ನೇರ ಒಪ್ಪಂದ ಮಾಡಿಕೊಂಡಿದ್ದೇವೆ. ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಪ್ರಾದೇಶಿಕ ಪಕ್ಷಗಳ ಬಗ್ಗೆ ವಾಗ್ದಾಳಿ ನಡೆಸಿದ ಅವರು, ಕೆಜೆಪಿ, ಜೆಡಿಎಸ್, ಬಿಎಸ್ಆರ್ ಕಾಂಗ್ರೆಸ್ ಪಕ್ಷಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ಗಳು. ಕಾಂಗ್ರೆಸ್ ಪಕ್ಷದ ಜೊತೆ ಒಳಗೆ ಮತ್ತು ಹೊರಗೆ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು.
ನೇರವಾಗಿ ಚುನಾವಣೆ ಗೆಲ್ಲಲಾಗದ ಕಾಂಗ್ರೆಸ್ ಇಂತಹ ಪ್ರಾದೇಶಿಕ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣೆ ಗೆಲ್ಲಲು ತಂತ್ರ ರೂಪಿಸಿದೆ ಎಂದು ದೂರಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ನಗರದ ಅಭಿವೃದ್ದಿಗೆ ಸಹಕರಿಸುವಂತೆ ಅವರು ಕೋರಿದರು.
ಸಮಗ್ರ ತನಿಖೆ ಅಗತ್ಯ : ಬಹುಕೋಟಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಒಂದು ಕುಟುಂಬ ಭಾಗಿಯಾಗಿದೆ. ಇವುಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ಬಗ್ಗೆ ಸಂಸತ್ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದರು.


Click it and Unblock the Notifications
