ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರಕ್ಕೆ ನೀರಿನ ಕೊರತೆ ಇಲ್ಲ-ಸುರೇಶ್ ಕುಮಾರ್

|
Google Oneindia Kannada News

S.Suresh Kumar.
ಬೆಂಗಳೂರು, ಮಾ.6 : ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಕಾವೇರಿ ಪಾತ್ರದ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ನೀರು ಪೂರೈಸಲು ಮಾತ್ರ ಬಳಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಸಂಸದೀಯ ವ್ಯವಹಾರ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸೋಮವಾರ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು, ನೀರಿನ ಕೊರತೆ ತಪ್ಪಿಸಲು ಶಿವಾ, ಶಿಂಷಾ, ಸತ್ಯಗಾಲ ಅಣೆಕಟ್ಟು, ಮತ್ತು ಮಾಧವ ಮಂತ್ರಿ ಬ್ಯಾರೇಜ್ ಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗುವುದು ಎಂದರು.

ಈ ಎಲ್ಲಾ ಕೇಂದ್ರಗಳಲ್ಲಿ ಉತ್ಪಾದನೆಯಾಗುತ್ತಿದ್ದ ವಿದ್ಯುತ್, ರಾಜ್ಯದ ಒಟ್ಟಾರೆ ಉತ್ಪಾದನೆಯ ಶೇ.1ಕ್ಕಿಂತಲೂ ಕಡಿಮೆ ಇದೆ. ತಾತ್ಕಾಲಿಕವಾಗಿ ವಿದ್ಯುತ್ ಉತ್ಪಾದನೆ ನಿಲ್ಲಿಸಿದರೆ ವಿದ್ಯುತ್ ಕೊರತೆ ಉಂಟಾಗುವುದಿಲ್ಲ. ಇದರಿಂದಾಗಿ 50 ಕ್ಯುಸೆಕ್ಸ್ ನೀರು ಉಳಿತಾಯವಾಗಲಿದೆ ಎಂದು ಹೇಳಿದರು.

ಶಿವಾ ಅಣೆಕಟ್ಟೆಯಿಂದ ನಗರಕ್ಕೆ ಹರಿದು ಬರು ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾವೇರಿ ನೀರಾವರಿ ನಿಗಮ, ಮೈಸೂರು ಮತ್ತು ಮಂಡ್ಯ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಾವಲು ಸಮಿತಿ ರಚನೆ : ಬೆಂಗಳೂರು ನಗರಕ್ಕೆ ಪೂರೈಕೆಯಾಗುವ ನೀರನ್ನು ನದಿ ಪಾತ್ರದಲ್ಲಿ ಅಕ್ರಮವಾಗಿ ಬಳಸದಂತೆ ತಡೆಯಲು ಕಾವಲು ಸಮಿತಿ ರಚಿಸಲಾಗುವುದು ಎಂದು ತಿಳಸಿದರು.

ಬೆಂಗಳೂರು ಜಲಮಂಡಳಿ, ಕಾವೇರಿ ನೀರಾವರಿ ನಿಗಮ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಅಧಿಕಾರಿಗಳು ಸಮಿತಿಯಲ್ಲಿರುತ್ತಾರೆ ಎಂದು ತಿಳಿಸಿದರು. ಮೇ ಅಂತ್ಯದ ವೇಳೆಗೆ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನ ನಾಗರೀಕರಿಗೆ ನೀರಿನ ಕೊರತೆ ಉಂಟಾಗದಂತೆ ತಡೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ನಾಗರೀಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

English summary
Bangalore will not face water problem said, Parliamentary Affairs and Urban Development minister S.Suresh Kumar. 0n Tuesday, March 5, he held meeting with BWSSB officers. And said temporarily we will stop Electricity generation in Cauvery river areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X