ಬ್ಲೂ ಫಿಲಂ ವೀಕ್ಷಣೆ, ಚುನಾವಣಾ ಅಧಿಕಾರಿ ಅಮಾನತು

 Election officer watched Blue Film during Local body election
ಚಾಮರಾಜ ನಗರ, ಮಾ 7: ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದ್ದ ಸಮಯದಲ್ಲಿ ಚುನಾವಣಾ ಅಧಿಕಾರಿ ಬ್ಲೂಫಿಲಂ ವೀಕ್ಷಿಸಿದ ಘಟನೆ ಚಾಮರಾಜ ನಗರದಿಂದ ವರದಿಯಾಗಿದೆ.

ಚಾಮರಾಜನಗರದ ವಾರ್ಡ ನಂಬರ್ 28ರಲ್ಲಿ ಕರ್ತವ್ಯ ನಿರತ ಚುನಾವಣಾ ಅಧಿಕಾರಿ ಪರಮಶಿವಮೂರ್ತಿ ತನ್ನ ಮೊಬೈಲ್ ನಲ್ಲಿ ನೀಲಿ ಚಿತ್ರ ವೀಕ್ಷಿಸುತ್ತಿದ್ದಾಗ ಮತದಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಈ ಬಗ್ಗೆ ಮತದಾರರು ಮತ್ತು ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರು ಪರಮಶಿವಮೂರ್ತಿ ಅವರನ್ನು ಪ್ರಶ್ನಿಸಿದಾಗ ಅವರನ್ನೇ ತರಾಟೆಗೆ ತೆಗೆದುಕೊಂಡು ಅನುಚಿತವಾಗಿ ವರ್ತಿಸಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಚುನಾವಣಾ ಅಧಿಕಾರಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯ ಅಧಿಕಾರಿಗಳು ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಚುನಾವಣಾ ಅಧಿಕಾರಿಯನ್ನು ಅಲ್ಲಿಂದ ಸಾಗ ಹಾಕಿದ್ದಾರೆ.

ಚುನಾವಣಾ ಅಧಿಕಾರಿ ಪರಮಶಿವಮೂರ್ತಿ ಅವರಿಂದ ಮೊಬೈಲ್ ವಶ ಪಡಿಸಿಕೊಂಡಿರುವ ಹಿರಿಯ ಅಧಿಕಾರಿಗಳು ಪರಮಶಿವಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ.

ವಿಧಾನಸೌಧದಲ್ಲಿ ಬ್ಲೂ ಫಿಲಂ ವೀಕ್ಷಿಸಿ ಸದನದ ಮಾನ ಹರಾಜು ಹಾಕಿದ್ದ ಮೂವರು ಶಾಸಕರ ಪ್ರಕರಣವನ್ನು ಮತ್ತೆ ಸ್ಮರಿಸಿಕೊಳ್ಳುವಂತೆ ಮಾಡಿದ್ದಾರೆ ಚುನಾವಣಾ ಅಧಿಕಾರಿ ಪರಮಶಿವಮೂರ್ತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+