ಜೆಡಿಎಸ್ ಬಲ ಹೆಚ್ಚಿದೆ ಎಂದರು ಕುಮಾರಸ್ವಾಮಿ

ಬೆಂಗಳೂರಿನ ಸದಾಶಿವನಗರದ ಜೆಡಿಎಸ್ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಜೆಡಿಎಸ್ ಪಕ್ಷ ಕೇವಲ ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರಗಳಿಗೆ ಉತ್ತರ ದೊರಕಿದೆ. ರಾಜ್ಯದ ಜನ ಜೆಡಿಎಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ ಎಂದರು.
ರಾಜ್ಯಾದ್ಯಂತ ಒಟ್ಟು ಜೆಡಿಎಸ್ 906 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪರ್ಧೆ ನೀಡಿದೆ. ಚುನಾವಣೆ ನಂತರ ಜೆಡಿಎಸ್ ಶಕ್ತಿ ಕುಗ್ಗಲಿದೆ ಎನ್ನುತ್ತಿದ್ದ ಸಮೀಕ್ಷೆಗಳು ಸುಳ್ಳಾಗಿವೆ. ವಿಧಾನಸಭೆ ಚುಣಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಫಲಿತಾಂಶ ನೆರವಾಗಿದೆ ಎಂದು ಹೇಳಿದರು.
ನಮ್ಮ ಪಕ್ಷದ ಅಭ್ಯರ್ಥಿಗಳ ಅಸಮಾಧಾನದಿಂದಾಗಿ ಸುಮಾರು 50 ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ಚುನಾವಣೆಗೆ ತಯಾರಾಗಲು ಸಮಯಾವಕಾಶ ಸಿಕ್ಕಿದ್ದರೆ ಎಲ್ಲ ಅಸಮಾಧಾನ ಬಗೆಹರಿಸಿ ಇನ್ನು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಗೆ ತಯಾರಾಗಲು ಈ ಫಲಿತಾಂಶ ಮಾನದಂಡವಾಗಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಎದುರಾಳಿಯಾಗಲಿದೆ. ಆಡಳಿತಾರೂಢ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಪಕ್ಷದ ಪರಿಸ್ಥಿತಿ ಹೀಗೆಯೇ ಆಗಲಿದೆ ಎಂದು ವಿಶ್ಲೇಷಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications