ನಮ್ಮ ಸೋಲಿಗೆ ಆಯೋಗ ಕಾರಣ : ಮದನ್ ಪಟೇಲ್

ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 171 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಆದರೆ, ಆಯೋಗದ ಮಾಹಿತಿ ಪ್ರಕಾರ ಕೇವಲ 86 ಸ್ಥಾನಗಳನ್ನು ಮಾತ್ರ ಪಡೆದಿದ್ದೇವೆ. ಆಯೋಗವು ಕೆಲವು ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಚಿಹ್ನೆ ನೀಡಿರಲಿಲ್ಲ.
ಆದ್ದರಿಂದ ಪಕ್ಷದ ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಬೇಕಾಯಿತು. ಆದರೂ ಅವರು ಜಯಗಳಿಸಿದ್ದಾರೆ. ಬಿಜಾಪುರ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಗೆಲುವು ಸಾಧಿಸಿದ ಅನೇಕ ಪಕ್ಷೇತರ ಅಭ್ಯರ್ಥಿಗಳು ಬಿಎಸ್ಆರ್ ಕಾಂಗ್ರೆಸ್ ಪಕ್ಷದವರು ಎಂದರು.
ಕೆಲವು ಪಾಲಿಕೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಬೆಂಬಲವಿಲ್ಲದೆ ಯಾವ ಪಕ್ಷದವರು ಅಧಿಕಾರ ನಡೆಸುವುದು ಅಸಾಧ್ಯ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದೆ. ವಿಧಾನಸಭೆ ಚುನಾವಣೆಗೆ ಈ ಶಕ್ತಿ ಸಹಾಯಕವಾಗಲಿದೆ ಎಂದರು.
ಬಿಎಸ್ಆರ್ ಕಾಂಗ್ರೆಸ್ ಪಕ್ಷ ಬಳ್ಳಾರಿಯಲ್ಲಿ ಸೋಲು ಅನುಭವಿಸಿರುವುದು ಬೇಸರ ತಂದಿದೆ. ಈ ಬಗ್ಗೆ ಪಕ್ಷದ ನಾಯಕರು ಆತ್ಮಾವಲೋಕನ ನಡೆಸಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೆಚ್ಚು ಪ್ರಾಧನ್ಯತೆ ನೀಡಿದ್ದರಿಂದ ಇಂತಹ ಪರಿಸ್ಥಿತಿ ಬಂದಿದೆ. ಮುಂದಿನ ಚುನಾವಣೆಯಲ್ಲಿ ಇಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಫಲಿತಾಂಶದ ನಂತರ ಯಾವ ರಾಜಕೀಯ ಪಕ್ಷಗಳು ಆತ್ಮಾವಲೋಕನ ಮಾಡಿಕೊಂಡು ಕಾಲಕಳೆಯುವ ಪರಿಸ್ಥಿತಿ ಇಲ್ಲ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪದಲ್ಲಿದ್ದು, ಅಗತ್ಯ ತಯಾರಿಯೊಂದಿಗೆ ಚುನಾವಣೆಗೆ ತಯಾರಾಗಬೇಕಾದ ಅನಿವಾರ್ಯತೆ ಉಂಟಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications