ವಾಯುಸೇನೆ ಮಾಜಿ ಮುಖ್ಯಸ್ಥ ತ್ಯಾಗಿ ಮೇಲೆ ಎಫ್ ಐಆರ್

ಎಸ್ ಪಿ ತ್ಯಾಗಿ ಅವರ ನವದೆಹಲಿ ಹಾಗೂ ಚಂಡೀಗಢದ ನಿವಾಸದ ಮೇಲೆ ಸಿಬಿಐ ತಂಡ ದಾಳಿ ನಡೆಸಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ನಿಮ್ಮ ಪಾತ್ರವೇನು? ಎಂದು ಪ್ರಶ್ನಿಸಿದೆ. ಈ 12 ಆರೋಪಿಗಳ ವಿರುದ್ಧ ವಂಚನೆ ಹಾಗೂ ಸಂಚು ಪ್ರಕರಣ ದಾಖಲಿಸಲಾಗಿದ್ದು, ಈ ಸಂಬಂಧ ಸಿಬಿಐ ಅಧಿಕಾರಿಗಳು ದೆಹಲಿ, ಎನ್‌ಸಿಆರ್ ಹಾಗೂ ಚಂಡೀಗಢ ಸೇರಿದಂತೆ 14 ಸ್ಥಳಗಲ್ಲಿ ಶೋಧ ನಡೆಸಿದ್ದಾರೆ.
ಹೆಲಿಕಾಪ್ಟರ್ ಹಗರಣ ಸಂಬಂಧಿಸಿದ ಕೆಲವು ಅಧಿಕೃತ ದಾಖಲೆಗಳನ್ನು ಇಟಲಿಯಿಂದ ಸ್ವೀಕರಿಸಿದ ಮಾರನೆ ದಿನವೇ ಸಿಬಿಐ ಎಫ್‌ಐಆರ್ ದಾಖಲಿಸಲಾಗಿದೆ, ತನಿಖೆ ತೀವ್ರಗೊಳಿಸಲಾಗಿದೆ ಎಂದು ಸಿಬಿಐ ಮೂಲಗಳು ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ಯಾಗಿ ಹಾಗೂ ಅವರ ಸಹೋದರರಾದ ಜೂಲಿ, ಡೋಸ್ಕಾ ತ್ಯಾಗಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಯುರೋಪ್‌ನ ಮಧ್ಯವರ್ತಿಗಳಾದ ಕಾರ್ಲೋ ಗೆರೋಸಾ ಮತ್ತು ಗಿಡೋ ಹಷ್ಕೆ ಜತೆಗಿನ ಸಂಬಂಧದ ಕುರಿತು ಸಿಬಿಐ ಅಧಿಕಾರಿಗಳು ಪ್ರಶ್ನೆ ಮಾಡಿದ್ದರು.
ಲಂಚದ ಹಣವನ್ನು ವರ್ಗಾಯಿಸುವಲ್ಲಿ ಪ್ರಮುಖ ಪಾತ್ರವಹಿಸಿತ್ತು ಎನ್ನಲಾದ ಭಾರತೀಯ ಕಂಪನಿಗಳಾದ ಏರೋಮ್ಯಾಟ್ರಿಕ್ಸ್, ಐಡಿಎಸ್ ಇನ್ಫೋಟೆಕ್ ಕಂಪನಿಗಳ ಅಧಿಕಾರಿಗಳ ವಿಚಾರಣೆಯನ್ನು ಈಗಾಗಲೇ ನಡೆಸಲಾಗಿದೆ. ಇಟಲಿಯ ಡಿಫೆನ್ಸ್ ಕಂಪನಿ ಫಿನ್ ಮೆಕ್ಯಾನಿಕಾ(SIFI.MI) ಹಾಗೂ ಭಾರತದ ಆಂಗ್ಲೋ ಇಟಾಲಿಯನ್ ಘಟಕ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಸರು ಕೂಡಾ ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ.












Click it and Unblock the Notifications