ಮೇ.21ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಸಾಧ್ಯತೆ

ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ರಾಜಕೀಯ ಪಕ್ಷಗಳು, ಸರ್ಕಾರಿ ಅಧಿಕಾರಿಗಳ ಜೊತೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ. ಸದ್ಯ ವಿದೇಶ ಪ್ರವಾಸದಲ್ಲಿರುವ ವಿ.ಎಸ್.ಸಂಪತ್ ಶುಕ್ರವಾರ ದೆಹಲಿಗೆ ಮರಳಲಿದ್ದು, ಮಂದಿನ ವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಂಭವವಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಸಲು ಆಯೋಗ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಮೂಲಗಳ ಮಾಹಿತಿ ಪ್ರಕಾರ ಮೇ.21ಕ್ಕರ ರಾಜ್ಯ ವಿಧಾನಸಭೆ ಚುನಾವಣೆ ನೆಡಯಲಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಮಾ.11ರಂದು ಪ್ರಕಟಗೊಂಡಿದೆ. ಮಾ.13ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದೆ. ಏಪ್ರಿಲ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪೂರ್ಣಗೊಳ್ಳಲಿದ್ದು ನಂತರ ಚುನಾವಣೆ ನಡೆಸಲು ಯಾವುದೇ ಅಡೆತಡೆಗಳಿಲ್ಲ.
ರಾಜ್ಯ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿ ಸಿದ್ಧತೆ, ಪರಿಷ್ಕರಣೆ ಮುಂತಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ನಿರ್ದೇಶಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಲೆಕ್ಕಾಚಾರದಲ್ಲೇ ರಾಜಕೀಯ ಪಕ್ಷಗಳು ಮುಳುಗಿದ್ದರೂ ವಿಧಾನಸಭೆ ಚುನಾವಣೆ ಸಿದ್ಧತೆಯಲ್ಲಿ ತೊಡಗಿದವೆ. ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಕ್ಷಗಳು ತಲ್ಲಿನವಾಗಿದ್ದು, ಚುನಾವಣೆ ಘೋಷಣೆಯಾಗುವುದನ್ನೆ ಎದುರು ನೋಡುತ್ತಿವೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications