ರಾಜ್ಯದಲ್ಲಿ ತೃತೀಯ ಶಕ್ತಿ ಕಟ್ಟುತ್ತೇನೆ : ಯಡಿಯೂರಪ್ಪ

ನಗರದ ಅರಮನೆ ಮೈದಾನದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಗಳಿಸಿದ ಕೆಜೆಪಿ ಅಭ್ಯರ್ಥಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹೊರತು ಪಡಿಸಿದ ಬೃಹತ್ ರಾಜಕೀಯ ಶಕ್ತಿ ಹುಟ್ಟು ಹಾಕಲಾಗುವುದು ಎಂದರು.
ರೈತಸಂಘ, ಸರ್ವೋದಯ ಪಕ್ಷ, ಸಮತಾ ಸೈನಿಕ ದಳ, ಸಿಪಿಐ, ಸಿಪಿಐಎಂ, ವಿವಿಧ ಕನ್ನಡ ಪರ ಸಂಘಟನೆಗಳ ಜೊತೆ ಈ ಕುರಿತು ಮಾತುಕತೆ ನಡೆಸಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದಿಲ್ಲ.
ಸಂಯುಕ್ತ ರಂಗದ ಮೂಲಕ ಎಲ್ಲಾ 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಬೃಹತ್ ರಾಜಕೀಯ ಶಕ್ತಿಯೊಂದು ಉಗಮವಾಗಲಿಗೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಪ್ರಾದೇಶಿಕ ಹಿತಾಸಕ್ತಿ ಕಾಪಾಡಲು ಸಂಯುಕ್ತ ರಂಗ ಅನಿವಾರ್ಯವಾಗಿದೆ. ರಾಷ್ಟ್ರೀಯ ಪಕ್ಷಗಳಂತೆ ಪಂಚತಾರಾ ಹೋಟೆಲ್ ನಲ್ಲಿ ಕುಳಿತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಜನರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ತಿಳಿಸಿದರು.
ಅನಂತ್ ಕುಮಾರ್ ರಾಜ್ಯಾಧ್ಯಕ್ಷ ರಾಗಲಿ : ಸಮಾವೇಶದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಮೇಲೆ ಕೋಪಗೊಂಡ ಯಡಿಯೂರಪ್ಪ. ಪಕ್ಷ ಸಂಘಟನೆ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ಅನಂತ ಕುಮಾರ್ ಪಕ್ಷದ ಎಲ್ಲಾ ವಿದ್ಯಾಮಾನಗಳಲ್ಲೂ ಮೂಗು ತೂರಿಸುತ್ತಾರೆ.
ಬಿಜೆಪಿ ನಾಯಕರು ಅನಂತ ಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಎಂದು ಘೋಷಿಸಲಿ. ನಂತರ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲಿ ಎಂದು ಸವಾಲು ಹಾಕಿದರು.ಹಗಲು ರಾತ್ರಿ ಕಷ್ಟ ಪಟ್ಟು ಕಟ್ಟಿದ ಪಕ್ಷದ ನಾಯಕರು ನನ್ನ ಬೆನ್ನಿಗೆ ಚೂರಿ ಹಾಕಿದರು. ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications