ಮುರುಗೇಶ್ ಪಾಳ್ಯದಲ್ಲಿ ಅಗ್ನಿ ಅವಘಢ

fire accident
ಬೆಂಗಳೂರು, ಮಾ.18 : ನಗರದ ಮುರುಗೇಶ್ ಪಾಳ್ಯದಲ್ಲಿ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದ್ದು 20 ವಾಹನಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಅಧಿಕಾರಿಗಳು ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮುರುಗೇಶ್ ಪಾಳ್ಯದಲ್ಲಿನ ಇನ್ ಫ್ಯಾಂಟ್ ಟ್ರಾವೆಲ್ಸ್ ನ ಸರ್ವೀಸ್ ಸ್ಟೇಷನ್ ನಲ್ಲಿ ಈ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸರ್ವೀಸ್ ಸ್ಟೇಷನ್ ನಲ್ಲಿದ್ದ 9 ಸ್ವರಾಜ್ ಮಜ್ದಾ ಮಿನಿ ಬಸ್ ಮತ್ತು 11 ಟಾಟಾ ವಿಂಗರ್ ವಾಹನಗಳು ಸುಟ್ಟು ಕರಕಲಾಗಿವೆ.

ಬೆಳಗ್ಗೆ 11.15ರ ಸುಮಾರಿಗೆ ಸರ್ವೀಸ್ ಸ್ಟೇಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಬೆಂಕಿ ಅಕ್ಕಪಕ್ಕದಲ್ಲಿ ನಿಂತಿದ್ದ ವಾಹನಗಳಿಗೆ ಹಬ್ಬಿತು. ಸ್ಥಳಕ್ಕಾಗಮಿಸಿದ 7 ಅಗ್ನಿ ಶಾಮಕ ವಾಹನಗಳು 2 ಗಂಟೆಯ ವರೆಗೂ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ ಹೆಚ್ಚಿನ ಕಾರ್ಮಿಕರು ಸರ್ವೀಸ್ ಸ್ಟೇಷನ್ ನಲ್ಲಿ ಇರಲಿಲ್ಲ. ಆದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಟ್ರಾವೆಲ್ಸ್ ಗೆ ಸೇರಿದ 20 ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೋಟ್ಯಾಂತರ ರೂ. ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕಿಟ್ ನಿಂದ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಒಟ್ಟಾರೆ ಎಷ್ಟು ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿಲ್ಲ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+