ಜೈಲಿಗೆ ಹೋಗಿದ್ದೆ ಬಿಜೆಪಿ ಸಾಧನೆ : ಸಿದ್ದರಾಮಯ್ಯ

 Siddaramaiah
ಬೆಂಗಳೂರು, ಮಾ.18 : ಮಾಜಿ ಮುಖ್ಯಮಂತ್ರಿ ಸೇರಿದಂತೆ ವಿವಿಧ ಸಚಿವರು ಜೈಲಿಗೆ ಹೋಗಿ ಬಂದಿದ್ದೆ ರಾಜ್ಯ ಬಿಜೆಪಿ ಸರ್ಕಾರದ ಐದು ವರ್ಷಗಳ ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೈಲಿಗೆ ಹೋಗುವುದರಲ್ಲೂ ದಾಖಲೆ ಬರೆದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಬೆಂಗಳೂರು ಮಹಾನಗರ ಕಾಂಗ್ರೆಸ್ ವತಿಯಿಂದ ಆರ್ ಬಿಎಎನ್ಎಂಎಸ್ ಮೈದಾನದಲ್ಲಿ ಆಯೋಜಿಸಿದ್ದ, ಶಿವಾಜಿ ನಗರ, ಶಾಂತಿ ನಗರ, ಸರ್.ಸಿ.ವಿ.ರಾಮನ್ ನಗರ ಮತ್ತು ಪುಲಿಕೇಶಿ ನಗರ ವಿಧಾನಸಭಾ ವ್ಯಾಪ್ತಿಯ ಕಾಂಗ್ರೆಸ್ ಗೆ ಬನ್ನಿ ಬದಲಾವಣೆ ತನ್ನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಿಜೆಪಿ ಸರ್ಕಾರ ಜನರಿಗೆ ಕೊಟ್ಟ ಯಾವ ಭರವಸೆಗಳನ್ನು ಈಡೇರಿಸಿಲ್ಲ. ಕುರ್ಚಿಗಾಗಿ ಕಿತ್ತಾಟ ನಡೆಸಿದ ಬಿಜೆಪಿಯವರ ಬಣ್ಣ ಬಯಲಾಗಿದೆ. ಜನರ ಸಂಕಷ್ಟ ಪರಿಹರಿಸದ ಸರ್ಕಾರ ಭ್ರಷ್ಟಾಚಾರ ಮಾಡುತ್ತಾ ಕಾಲ ಕಳೆದಿದೆ ಎಂದು ಆರೋಪಿಸಿದರು.

ಜೈಲಿಗೆ ಹೋಗಿಬಂದ ಯಡಿಯೂರಪ್ಪ ತಮ್ಮ ಸಂಪುಟದ, ಕಟ್ಟಾ ಸುಬ್ರಮಣ್ಯ ನಾಯ್ಡು, ಹಾಲಪ್ಪ, ಸೋಮಶೇಕರ ರೆಡ್ಡಿ, ಜನಾರ್ಧನ ರೆಡ್ಡಿ ಮುಂತಾದ ಸಹೋದ್ಯೋಗಿಗಳು ಜೈಲಿಗೆ ಕಳುಹಿಸುವ ಮೂಲಕ ಬೃಹತ್ ದಾಖಲೆ ಸ್ಥಾಪಿಸಿದರು ಎಂದು ಲೇವಡಿ ಮಾಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಟಷ್ಟ ಬಹುಮತ ಪಡೆದು ಅಧಿಕಾರ ಪಡೆಯಲಿದೆ. ಚುನಾವಣೆ ನಂತರ ಬಿಜೆಪಿ ಸಂಪೂರ್ಣವಾಗಿ ರಾಜ್ಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ. ಚುನಾವಣೆಯ ಗೆಲುವಿಗಾಗಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಶಾಸಕರಾದ ದಿನೇಶ್ ಗುಂಡೂರಾವ್, ಹ್ಯಾರೀಸ್, ಕೆ.ಜೆ.ಜಾರ್ಜ್, ಪ್ರಸನ್ನ ಕುಮಾರ್, ರೋಷನ್ ಬೇಗ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಿದ್ದುಗೆ 40 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಬಂದು 40 ವರ್ಷಗಳು ಸಂದಿವೆ. ಈ ಹಿನ್ನೆಲೆಯಲ್ಲಿ ಅವಕಾಶ ವಂಚಿತ ಸಮುದಾಯಗಳ ವರ್ತಮಾನ' ಎಂಬ ವಿಚಾರ ಗೋಷ್ಠಿಯನ್ನು ಮಾ.20ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನ್ಯಾ.ಎಂ.ಎನ್.ರಾವ್ ಅವರು ವಿಚಾರಗೋಷ್ಠಿ ಉದ್ಘಾಟಿಸಲಿದ್ದಾರೆ. ಸಿದ್ದರಾಮಯ್ಯ, ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+