6 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎ.ನಾರಾಯಣಪುರ ವಾರ್ಡ್ ನಂ 56ರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರಸಾದ್ ಜಯಗಳಿಸಿದ್ದರು, ಆದರೆ, ಅವರು ಚುನಾವಣಾ ಆಯೋಗಕ್ಕೆ ಜಾತಿ ಪ್ರಮಾಣ ಪತ್ರ ಸಲ್ಲಿಸಿಲ್ಲವೆಂದು, ಆಯೋಗ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿತ್ತು. ಇದರಿಂದ ತೆರವಾಗಿರುವ ಕ್ಷೇತ್ರಕ್ಕೆ ಏ.7ರಂದು ಉಪ ಚುನಾವಣೆ ನಡೆಯುತ್ತಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಎರಡು ಸ್ಥಾನ, ಕಡಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಜಿಲ್ಲಾ ಪಂಚಾಯಿತಿ ಕ್ಷೇತ್ರ, ಅರಿಶಿನಕುಂಟೆ ತಾಲೂಕು ಪಂಚಾಯಿತಿಯ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಒಟ್ಟು ಬಿಬಿಎಂಪಿ ವ್ಯಾಪ್ತಿಯ ಒಂದು ಹಾಗೂ ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 6 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ.
ಏ.7ರಂದು ಭಾನುವಾರ 6 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಮಾ.20ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಮಾ.20ರಿಂದ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾ.27 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾ.30ರಂದು ನಾಮಪತ್ರ ಹಿಂಪಡೆಯಹುದಾಗಿದೆ.
ಏ.7ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದೆ. ಯಾವುದಾರರೂ ಕ್ಷೇತ್ರಕ್ಕೆ ಮರು ಮತದಾನ ನಡೆಸುವ ಅಗತ್ಯವಿದ್ದರೆ ಏ.9 ರಂದು ನಡೆಸಲಾಗುತ್ತದೆ. ಏ.10ರಂದು ಮತ ಎಣಿಕೆ ನಡೆಯಲಿದ್ದು ಅಂದೇ ಚುನಾವಣಾ ಫಲಿತಾಂಶ ಘೋಷಿಸಲಾಗುವುದು ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಪ ಚುನಾವಣೆ ಮುಗಿಯುವ ವರೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುದಿಲ್ಲ. ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡರು ಮೇ ತಿಂಗಳಿನಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ರಾಜಕೀಯ ಪಕ್ಷಗಳು ಉಪ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತವೆಯೋ? ಅಥವ ವಿಧಾನಸಭೆ ಚುನಾವಣೆ ತಯಾರಿಯಲ್ಲಿ ತೊಡಗುತ್ತವೆಯೋ ಕಾದು ನೋಡಬೇಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications