ಮುಂಬೈಗೆ ಹೊರಟ ಬಸ್ ನೀರು ಪಾಲು, 37 ಜನ ಮೃತ

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇದ್ ಜಂಕ್ಷನ್ ಬಳಿಯ ನದಿಗೆ ಆಯತಪ್ಪಿ ಬಸ್ ಬಿದ್ದ ಪರಿಣಾಮ ಸುಮಾರು 37 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಖೇದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಈ ದುರಂತದಲ್ಲಿ ಕೆಲವು ವಿದೇಶಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ರಷ್ಯನ್ ಮೂಲದ ವ್ಯಕ್ತಿಯನ್ನು ಅಪಾಯದಿಂದ ಪಾರು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಜಗ್ಬುದಿ ಸೇತುವೆ ಬಳಿ ಬಸ್ ಮೇಲೆ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದಾನೆ. ಜಗ್ ಬುದಿ ನದಿಗೆ ಬಸ್ ಹಾರಿದೆ. ಮುಂಜಾನೆ ವೇಳೆಯಲ್ಲಿ ಘಟನೆ ಸಂಭವಿಸಿದ್ದರಿಂದ ಹಲವಾರು ಪ್ರಯಾಣಿಕರು ನಿದ್ರಾವಸ್ಥೆಯಲ್ಲಿದ್ದರು ಎಂದು ತಿಳಿದು ಬಂದಿದೆ. ವಾಹನ ಚಲಿಸುವಾಗ ಚಾಲಕ ಮದ್ಯಪಾನ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಾಲಕನನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ.












Click it and Unblock the Notifications