ಮುರುಗೇಶ್ ನಿರಾಣಿಗೆ ಲೋಕಾಯುಕ್ತ ತನಿಖೆ ಭೀತಿ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಯದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ದೇವನಹಳ್ಳಿಯಲ್ಲಿ ಪಡೆದಿದ್ದ ಭೂಮಿಯನ್ನು ಮುರುಗೇಶ್ ನಿರಾಣಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಉದ್ಯಮಿ ಎ.ಆಲಂ ಪಾಷ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ವಿಚಾರಣೆ ಪೂರ್ಣಗೊಂಡಿದ್ದು ಮುರುಗೇಶ್ ನಿರಾಣಿ ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವುದು ಧೃಡಪಟ್ಟಿದೆ. ಮಂಗಳವಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರಿನ ವಿಚಾರಣೆ ನಡೆಯುವಾಗ ತನಿಖಾಧಿರಿಗಳು ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮುರುಗೇಶ್ ನಿರಾಣಿಯವರ ಪಾತ್ರ ಸಾಬೀತಾಗಿರುವ ಹಿನ್ನಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ವಿಧಾನಸಭೆ ಸ್ಪೀಕರ್ ಕೆ.ಜೆ.ಬೋಪಯ್ಯ ಅವರಿಗೆ ಪತ್ರ ಬರೆಯಲಿದ್ದೇವೆ ಎಂದು ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಮಾಹಿತಿ ಪ್ರಕಾರ ಸ್ಪೀಕರ್ ಕೆ.ಜೆ.ಬೋಪಯ್ಯ ಅವರಿಗೆ ಮಂಗಳವಾರವೇ ಲೋಕಾಯುಕ್ತ ಪೊಲೀಸರು ಪತ್ರ ಬರೆದು ವಿಚಾರಣೆಗೆ ಅನುಮತಿ ಕೇಳಿದ್ದಾರೆ. ಕೆ.ಜಿ.ಬೋಪಯ್ಯ ಅವರು ಅನುಮತಿ ನೀಡಿದರೆ ತಕ್ಷಣ ಮುರುಗೇಶ್ ನಿರಾಣಿ ಅವರ ವಿಚಾರಣೆ ಪ್ರಾರಂಭವಾಗಲಿದೆ.
ಲೋಕಾಯುಕ್ತ ಪೊಲೀಸರು ಇದುವರೆಗೂ ಶಾಸಕ ಮತ್ತು ಸಚಿವರ ವಿರುದ್ಧದ ಹಗರಣಗಳ ತನಿಖೆ ಅನುಮತಿ ಕೋರಿ ಸ್ಪೀಕರ್ ಗೆ ಸಲ್ಲಿಸಿದ್ದ ಮನವಿಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಸರ್ಕಾರ ಯಾವ ಶಾಸಕರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿಲ್ಲ.
ಇತ್ತೀಚೆಗಷ್ಟೆ ಶಾಸಕ ಎಸ್.ಆರ್.ವಿಶ್ವನಾಥ್ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮನವಿಯೂ ಬಾಕಿ ಉಳಿದಿದೆ. ಈಗಾಗಲೇ ಬಿಜೆಪಿ ತೊರೆದು ಕೆಜೆಪಿ ಸೇರುವುದಾಗಿ ಮುರುಗೇಶ್ ನಿರಾಣಿ ಘೋಷಿಸಿದ್ದು, ಬಿಜೆಪಿ ತೊರೆದರೆ ಸ್ಪೀಕರ್ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. (ರಾಜ್ಯ ಚುಣಾವಣೆ ವೇಳಾಪಟ್ಟಿ)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications