ಉತ್ತಮವಾಗಿ ಆಡಳಿತ ನಡೆಸಿದ್ದೇವೆ : ಸಿಎಂ ಶೆಟ್ಟರ್

Jagadish Shettar
ಬೆಂಗಳೂರು, ಮಾ.20 : ರಾಜ್ಯದಲ್ಲಿ ಐದು ವರ್ಷಗಳ ಆಡಳಿತವನ್ನು ಉತ್ತಮವಾಗಿ ಪೂರ್ಣಗೊಳಸಿದ್ದೇವೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸರ್ಕಾರ ಆಡಳಿತ ತೃಪ್ತಿ ತಂದಿದೆ ಎಂದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಪ್ರತಿಕ್ಷಗಳ ಕುತಂತ್ರ ರಾಜಕಾರಣ ನಡೆಯಲಿಲ್ಲ. ಐದು ವರ್ಷಗಳ ಕಾಲ ಸಮರ್ಥವಾಗಿ ಆಡಳಿತ ನಡೆಸಿದ್ದೇವೆ. ಉತ್ತಮವಾದ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಆಯೋಗದ ನಿರ್ಧಾರ ಸ್ವಾಗತಿಸಿದ ಅವರು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಎಸ್ಆರ್ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಯಾವುದೇ ಮೈತ್ರಿ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ವಿಧಾನಸಭೆ ಚುನಾವಣೆಗೆ ಬಿಜೆಪಿ ಸಂಪೂರ್ಣವಾಗಿ ಸಿದ್ದವಾಗಿದೆ. ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದೇವೆ. ಮಾ.23ರಂದು ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ, ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು ಎಂದರು.

ಸಂಸದ ಡಿ.ಬಿ.ಚಂದ್ರೇಗೌಡ ಅವರ ನೇತೃತ್ವದಲ್ಲಿ ಚುನಾವಣಾ ಪ್ರಾಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಈ ಕಾರ್ಯ ಪ್ರಾರಂಭಿಸಲಾಗಿದೆ. ಶೀಘ್ರದಲ್ಲೇ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ನಾಳೆಯಿಂದ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಬೂತ್ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಚುನಾವಣಾ ಪ್ರಚಾರಕ್ಕೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಕರೆಸುತ್ತೇವೆ ಎಂದು ಘೋಷಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಚಿವ ಸುರೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. (ರಾಜ್ಯ ಚುನಾವಣಾ ವೇಳಾಪಟ್ಟಿ ನೋಡಿ)

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+