ತ್ರಿಶಂಕು ಸ್ಥಿತಿ ತಲುಪಿದ ಶಾಸಕ ಬೇಳೂರು

* ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ- May 5, 2013
* ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ- May 8, 2013
ತಮ್ಮ ರಾಜಕೀಯ ಗುರು ಎಂದೇ ಹೇಳಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಮೂಲಕ ಜೆಡಿಎಸ್ ಸೇರ್ಪಡೆಗೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದು, ಶೀಘ್ರವೇ ತೆನೆ ಹೊತ್ತ ಮಹಿಳೆಯ ಕೈಹಿಡಿಯಲು ಸನ್ನದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಾಗರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನೆಲೆ ಇಲ್ಲದ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ ಜೆಡಿಎಸ್‌ಗೆ ಸೇರ್ಪಡೆಗೊಳ್ಳುವುದರಿಂದ ಪಕ್ಷಕ್ಕೆ ಬಲ ಬರಲಿದೆ ಎಂಬ ಲೆಕ್ಕಾಚಾರವೂ ನಡೆದಿದೆ.
ಈಶು ಮುಖ ನೋಡಿ ಓಟು ಹಾಕೋಕೆ ಆಗುತ್ತಾ?:
ಈಶ್ವರಪ್ಪ ತಮಗೆ ಗೇಟ್ ಪಾಸ್ ಕೊಟ್ಟಿದ್ದಕ್ಕೆ ಸಿಟ್ಟಿಗೆದ್ದ ಬೇಳೂರು, ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಈಶ್ವರಪ್ಪ ಮಾತಿಗೆ ತಕ್ಷಣ ತೀಕ್ಷಣ ಪ್ರತಿಕ್ರಿಯೆ ನೀಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ 'ಈಶ್ವರಪ್ಪ ಮುಖ ನೋಡಿದರೇ ಯಾರೂ ಮತ ಹಾಕುವುದಿಲ್ಲ' ಎಂದು ಗಂಭೀರವಾಗಿ ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಇವರನ್ನು (ಈಶ್ವರಪ್ಪ) ಮುಂದಿಟ್ಟುಕೊಂಡು ಮತ ಯಾಚಿಸಿದರೆ (ಬಿಜೆಪಿ) ಠೇವಣಿ ಕಳೆದುಕೊಳ್ಳುವುದು ನಿಶ್ಚಿತ. ಈ ಭಯದಿಂದಲೇ ತಾವು ಬಿಜೆಪಿ ತೊರೆಯುತ್ತಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆ ಪಕ್ಷದಿಂದ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
'ಈಶ್ವರಪ್ಪ ಮುಖ ಶಿವಮೊಗ್ಗಕ್ಕೆ ಮಾತ್ರ ಸೂಕ್ತವಾಗಿದೆ. ಇತರೆಡೆ ಇವರ ಮುಖ ಇಟ್ಟುಕೊಂಡು ಚುನಾವಣೆ ಎದುರಿಸಿದರೆ ಸೋಲುವುದು ನಿಶ್ಚಿತ. ವಿಧಾನಸಭೆ ಉಪ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದು ಸಾಬೀತಾಗಿದೆ' ಎಂದು ಬೇಳೂರು ವ್ಯಂಗ್ಯವಾಡಿದ್ದಾರೆ.












Click it and Unblock the Notifications