ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ?

ರಾಜ್ಯ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುವುದರಿಂದ ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಬೆಂಗಳೂರು ನಗರದ ಮತಪಟ್ಟಿಯಲ್ಲಿದ್ದ ದೋಷಗಳನ್ನು ಸರಿಪಡಿಸಲಾಗಿದೆ ಎಂದರು.
ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಸುಮಾರು 40 ಸಾವಿರ ದೋಷಗಳಿದ್ದವು ಎಲ್ಲವನ್ನು ಸರಿಪಡಿಸಿ ಅರ್ಹ ಮತದಾರರ ಪಟ್ಟಿ ಅಂತಿಮಗೊಳಿಸಲಾಗಿದೆ. ಶೇ.98ರಷ್ಟು ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
1-1-2013ಕ್ಕೆ 18 ವರ್ಷ ತುಂಬಿದವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. 2.87 ಲಕ್ಷ ಮತದಾರರು ಅರ್ಜಿ ಸಲ್ಲಿಸಿದ್ದರು. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ 1.65 ಲಕ್ಷ ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ ಎಂದು ಹೇಳಿದರು.
ಮತದಾರರ ಗುರುತಿನ ಚೀಟಿ ಇದೆ ಎಂಬ ಉಡಾಫೆ ಬಿಟ್ಟು ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ? ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ, ಇದರಿಂದ ಮತದಾನದ ದಿನ ಆಗಬಹುದಾದ ಗೊಂದಲ ನಿವಾರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಏ.10ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು. ಮೇ 5ರಂದು ಚುನಾವಣೆ ನಡೆಯಲಿದ್ದು, ಮೇ 8ರಂದು ಮತ ಎಣಿಕೆ ನಡೆಯಲಿದೆ. ಅಂದು ಸಂಜೆ 5 ಗಂಟೆಯ ವೇಳೆಗೆ 224 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಳ್ಳಿದೆ ಎಂದು ಚುನಾವಣೆಯ ವಿವರ ನೀಡಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications