ಬೆಳಗಾವಿ ಉತ್ತರ: ಬಿಜೆಪಿ ಅಭ್ಯರ್ಥಿಯಾಗಿ ಮುತಾಲಿಕ್!

ಇದರೊಂದಿಗೆ ದಕ್ಷಿಣ ರಾಜ್ಯಗಳ ಭಜರಂಗದಳದ ಮಾಜಿ ಸಂಚಾಲಕ, ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಮೂಲಕ RSS ತೆಕ್ಕೆಗೆ ಮರಳಲು ವೇದಿಕೆ ಸಿದ್ಧವಾದಂತಿದೆ.
ರಾಜ್ಯದ 58 ಕ್ಷೇತ್ರಗಳಲ್ಲಿ ಶ್ರೀರಾಮ ಸೇನೆ ಸಂಘಟನೆ ಬಲಿಷ್ಠವಾಗಿದೆ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. ಇದಕ್ಕೆ ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀ ಮತ್ತು ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಗಾವಿ, ಬಿಜಾಪುರ, ಗುಲ್ಬರ್ಗಾ, ಧಾರವಾಡ, ಚಿಕ್ಕಮಗಳೂರು, ಕಾರವಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶ್ರೀರಾಮ ಸೇನೆ ಸಂಘಟನೆ ಸಕ್ರಿಯವಾಗಿದ್ದು, ಮುತಾಲಿಕ್ ಅವರನ್ನು ಪಕ್ಷದ ತೆಕ್ಕೆಗೆ ತೆಗೆದುಕೊಂಡರೆ ಬಿಜೆಪಿಗೆ ಅನುಕೂಲವಾಗಲಿದೆ ಎಂದು ದೆಹಲಿ ಮಟ್ಟದಲ್ಲಿ ವರಿಷ್ಠರು ಆಲೋಚಿಸಿದ್ದಾರೆ ಎನ್ನಲಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications