ಭಯೋತ್ಪಾದನೆಯ ಹೋಳಿ: ಉಗ್ರರ ಬಂಧನ

Holi in Delhi- Delhi Police nabs terrorists,
ನವದೆಹಲಿ, ಮಾರ್ಚ್ 22: ಹೋಳಿಹಬ್ಬದ ಆಚರಣೆ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹವಣಿಸುತ್ತಿದ್ದ ಉಗ್ರರನ್ನು ರಾಜಧಾನಿ ಪೊಲೀಸರು ಬಂಧಿಸಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಯಗ್ರರನ್ನು ನಿನ್ನೆ ಗುರುವಾರ ಬಂಧಿಸಲಾಗಿದೆ.

ಅದಕ್ಕೂ ಮುನ್ನ ಉತ್ತರ ಪ್ರದೇಶದ ಘೋರಕ್ ಪುರದಲ್ಲಿ ಮತ್ತೊಬ್ಬ ಉಗ್ರನನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಲಿಯಾಕತ್ ಷಾ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿರುವ ಹಾಜಿ ಅರಾಫತ್ ಅತಿಥಿ ಗೃಹದ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಇಬ್ಬರು ಉಗ್ರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತ ಇಬ್ಬರೂ ಕಾಶ್ಮೀರದಿಂದ ಬಂದವರು. ಅತಿಥಿ ಗೃಹದ ಮೇಲೆ ದಾಳಿ ನಡೆಸಿದಾಗ ಉಗ್ರರಿಂದ AK-47 ರೈಫಲ್ ಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿಥಿ ಗೃಹವನ್ನು ಪೊಲೀಸರು ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ. ಬಂಧಿತ ಉಗ್ರರು ದೆಹಲಿಯ ನಾನಾ ಭಾಗಗಳಲ್ಲಿ ಸಂಚರಿಸಿದ್ದು, ಹೋಳಿ ಹಬ್ಬದ ಸಂದರ್ಭದಲ್ಲಿ (ಮಾರ್ಚ್ 27) ಭಯೋತ್ಫಾದನೆ ದಾಳಿ ನಡೆಸಲು ಸ್ಥಳಗಳನ್ನು ಗುರುತಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯದ ಮೇಲೂ ಉಗ್ರರ ಕರಿನೆರಳು: ಜತೆಗೆ, ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯದ ವೇಳೆಯೂ ಉಗ್ರ ದಾಳಿ ನಡೆಸಲು ಯೋಜಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+