ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಬಿಟ್ಟವರು ಪಕ್ಷಕ್ಕೆ ಮರಳಿ ಬನ್ನಿ : ಪ್ರಹ್ಲಾದ್ ಜೋಷಿ

|
Google Oneindia Kannada News

Prahlad Joshi
ಬೆಂಗಳೂರು, ಮಾ.22 :"ಬಿಜೆಪಿ ತೊರೆದು ಬೇರೆ ಪಕ್ಷಗಳನ್ನು ಸೇರಿರುವ ಶಾಸಕರು ಮತ್ತೊಮ್ಮೆ ಪಕ್ಷಕ್ಕೆ ಮರಳುವುದಾದದರೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ. ವಿವಿಧ ಕಾರಣಗಳಿಗಾಗಿ ಪಕ್ಷ ಬಿಟ್ಟವರು ಮತ್ತೆ ಪಕ್ಷಕ್ಕೆ ಮರಳಬಹುದು" ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಕರೆ ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬೆಂಗಳೂರಿಗೆ ಗುರುವಾರ ರಾತ್ರಿ ಆಗಮಿಸಿದ ಅವರು, ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಲವು ದಿನಗಳಿಂದ ಅನೇಕರು ಪಕ್ಷ ಬಿಟ್ಟು ಬೇರೆಪಕ್ಷ ಸೇರಿದ್ದಾರೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಪಕ್ಷ ಬಿಟ್ಟವರು ಮರಳುವುದಾದದರೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ಆಹ್ವಾನ ನೀಡಿದರು.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ರಾಷ್ಟ್ರೀಯ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಮಹತ್ತರ ಜವಾಬ್ದಾರಿ ನೀಡಿದ್ದಾರೆ. ಪಕ್ಷ ಸಂಘಟನೆಗೆ ಅವಿರತವಾಗಿ ಶ್ರಮವಹಿಸಿ ದುಡಿಯುತ್ತೇನೆ ಎಂದು ಘೋಷಿಸಿದರು. ನೂತನ ಅಧ್ಯಕ್ಷರ ಮುಂದೆ ಹಲವಾರು ಸವಾಲುಗಳಿವೆ ಸಮರ್ಥವಾಗಿ ಎಲ್ಲವನ್ನು ನಿಬಾಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಸರ್ಕಾರ ನಮ್ಮದೆ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಆಗಿರುವುದು ನಿಜ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನರು ಮತ ನೀಡಲಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿ ಬಿಜೆಪಿ ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂದು ಹೇಳಿದರು.

ಕೆಜೆಪಿ ಎದುರಾಳಿಯಲ್ಲ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮಾತ್ರ ಬಿಜೆಪಿಗೆ ಎದುರಾಳಿಗಳು. ಯಡಿಯೂರಪ್ಪ ನೇತೃತ್ವದ ಕೆಜೆಪಿ ಬಿಜೆಪಿಗೆ ಚುನಾವಣೆಯಲ್ಲಿ ಸ್ಪರ್ಧೆ ಒಡ್ಡಲಾರದು ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆ ತಯಾರಿ ಪ್ರಾರಂಭಿಸಿದ್ದೇವೆ. ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. ಮಾ.23ರ ರಾಜ್ಯ ಚುನಾವಣಾ ಸಮಿತಿ ಸಭೆಗೆಯ ಬಳಿಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದಪಡಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು ಎಂದರು.

ಅನಂತ ಲಾಬಿ ನಡೆದಿಲ್ಲ : ನನ್ನನ್ನು ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಲಾಬಿ ನಡೆಸಿದ್ದಾರೆ ಎಂಬುದು ಸುಳ್ಳು. ನಾನು ಮೊದಲಿನಿಂದಲೂ ಸಂಘದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇ. ನನ್ನ ಪರಿಶ್ರಮ ನೋಡಿ ಪಕ್ಷದ ವರಿಷ್ಠರು ರಾಜ್ಯಾಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು. (ರಾಜ್ಯ ಚುನಾವಣಾ ವೇಳಾಪಟ್ಟಿ)

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
State BJP new president Prahlad Joshi called all who are quit party to rejoin the BJP. After elected as BJP president, Thursday, March, 21 he addressed press persons at Bangalore BJP office and said, some MLAs have quit BJP for wrong reasons, I am welcoming all of them to join party again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X