ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಧನಂಜಯ್ ಕುಮಾರ್

ಕರ್ನಾಟದ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಆಸೆಯಿಂದ ಕೆಜೆಪಿ ಸೇರಿಲ್ಲ. ನಾನು ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಅಲ್ಲ ಎಂದು ಹೇಳಿದರು.
ಕೆಜೆಪಿಯನ್ನು ರಾಜ್ಯಾದ್ಯಂತ ಕಟ್ಟಿ ಬೆಳೆಸಿ ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಅದನ್ನು ಸಮರ್ಥವಾಗಿ ನಿಬಾಯಿಸುತ್ತೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕನಾಗಿ ಅಧಿಕಾರ ಪಡೆಯುವ ಕನಸು ನನಗಿಲ್ಲ, ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದರು.
ಬಿಜೆಪಿ ಸೋಲಿಗೆ ಅನಂತ ಕಾರಣ : ಬಿಜೆಪಿ ಮುಂದಿನ ಚುನಾವಣೆಯ ಸೋಲಿಗೆ ರಾಜ್ಯಾಧ್ಯಕ್ಷರ ಆಯ್ಕೆಯಿಂದಲೇ ಚಾಲನೆ ನೀಡಿದೆ ಎಂದು ವ್ಯಂಗ್ಯವಾಡಿದ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ತಮ್ಮ ಪ್ರಭಾವ ಬಳಸಿ ಪ್ರಹ್ಲಾದ್ ಜೋಷಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರಹ್ಲಾದ್ ಜೋಷಿ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ನಿರಾಸೆ ಉಂಟು ಮಾಡಿದೆ ಎಂದು ಕುಹುಕವಾಡಿದ ಅವರು, ನಾಯಕರ ನಡುವಿನ ಆಂತರಿಕ ಜಗಳವೇ ಚುನಾವಣೆಯಲ್ಲಿ ಅವರ ಸೋಲಿಗೆ ಕಾರಣವಾಗುತ್ತದೆ ಎಂದು ವಿಶ್ಲೇಷಿಸಿದರು.
ಕೆಜೆಪಿ ಅಧಿಕಾರಕ್ಕೆ : ವಿಧಾನಸಭೆ ಚುನಾವಣೆಯಲ್ಲಿ ಕೆಜಪಿ ಅಧಿಕಾರ ಪಡೆಯಲು ಬೇಕಾದಷ್ಟು ಶಾಸಕರು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈಗಾಗಲೇ 69 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಮಾ.26ರಿಂದ 28ರ ವರೆಗೆ ಪಕ್ಷದ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಜೆಡಿಎಸ್, ಬಿಎಸ್ಆರ್ ಪರಿಗಣಿಸಲ್ಲ : ಜೆಡಿಎಸ್ ಮತ್ತು ಬಿಎಸ್ಆರ್ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳಾದರೂ ಮುಂದಿನ ಚುನಾವಣೆಯಲ್ಲಿ ಅವುಗಳೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳವುದಿಲ್ಲ. 224 ಕ್ಷೇತ್ರಗಳಲ್ಲೂ ಕೆಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications