ಮಾಗಡಿ ರಸ್ತೆಯಲ್ಲಿ ಬೆಂಕಿ ಆಕಸ್ಮಿಕ : ಆರು ಸಾವು

ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್ ನಲ್ಲಿರುವ ಎಸ್.ಆರ್.ಸೀಟಿಂಗ್ ಸಿಸ್ಟಂ ಗೋಡೌನ್ ನಲ್ಲಿ ಈ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಬೆಳಗ್ಗೆ 5.30ರ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಗೋದಾಮಿನಲ್ಲಿ ಒಟ್ಟು 8 ಜನ ಕಾರ್ಮಿಕರರಿದ್ದರು. ಇವರಲ್ಲಿ ಆರು ಮಂದಿ ಸಜೀವವಾಗಿ ದಹನವಾಗಿದ್ದಾರೆ.
ಮೃತಪಟ್ಟವರು ಉತ್ತರ ಭಾರತ ಕಾರ್ಮಿಕರಾಗಿದ್ದು 22-28 ವರ್ಷದವರು ಎಂದು ಗುರುತಿಸಲಾಗಿದ್ದು, ಎಲ್ಲರೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ತಾಬಿಲ್, ಸರ್ಫರೋಜ್, ನೂರ್ ಹಾಸನ್, ಉಸ್ಮಾನ್, ನದೀಂ ಖಾನ್, ಗಜಿನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಳಗ್ಗೆ 5.30ರ ಸುಮಾರಿಗೆ ಒಬ್ಬ ಕಾರ್ಮಿಕ ಟೀ ಕುಡಿಯಲು ಹೊರಗಿನಿಂದ ಗೋಡೌನ್ ಬಾಗಿಲು ಹಾಕಿಕೊಂಡು ಹೋಗಿದ್ದು, ಬೆಂಕಿ ಹೊತ್ತಿಕೊಂಡ ತಕ್ಷಣ ಉಳಿದ ಕಾರ್ಮಿಕರು ಹೊರಬರಲಾರದೆ ಸ್ಥಳದಲ್ಲೇ ಸಜೀವವಾಗಿ ದಹನವಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ 7 ಅಗ್ನಿ ಶಾಮಕ ದಳದ ವಾಹನಗಳು ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಸ್.ಆರ್.ಸೀಟಿಂಗ್ ಸಿಸ್ಟಂ ಸಿನಿಮಾ ಮಂದಿರಗಳಿಗೆ ಐಷಾರಾಮಿ ಆಸನಗಳನ್ನು ತಯಾರಿಸುವ ಕಾರ್ಖನೆಯ ಗೋಡೌನ್ ಆಗಿತ್ತು. ಒಬ್ಬ ಕಾರ್ಮಿಕನಿಗೆ ಗಂಭೀರಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ರಾತ್ರಿ ಪಾಳಿಯಲ್ಲಿ ಒಟ್ಟು 8 ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು ಒಬ್ಬ ಕಾರ್ಮಿಕನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಬೆಂಕಿ ಬಿದ್ದ ತಕ್ಷಣ ಗೋದಾಮಿನ ಮಾಲೀಕ ಅಮಿತ್ ರಾಥೋಡ್ ಸುಂದರಲಾಲ್ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಟುಕಾಟ ನಡೆಸುತ್ತಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications