ರೇಷನ್, ಆಧಾರ್ ಕಾರ್ಡ್ ಹಂಚಿಕೆಗೆ ಆಯೋಗ ತಡೆ

Anil Kumar Jha.
ಬೆಂಗಳೂರು, ಮಾ.28 : ಚುನಾವಣೆ ಸಮೀಪಿಸುತ್ತಿದ್ದಂತೆ ರೇಷನ್ ಕಾರ್ಡ್, ಆಧಾರ ಕಾರ್ಡ್ ನೀಡುವ ಮೂಲಕ ಮತದಾರರನ್ನು ಓಲೈಸಲು ಯೋಜನೆ ರೂಪಿಸಿದ್ದ ರಾಜಕೀಯ ಪಕ್ಷಗಳ ತಂತ್ರಗಳಿಗೆ ಹಿನ್ನಡೆ ಉಂಟಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಚುನಾವಣಾ ಪ್ರಕ್ರಿಯೆ ಮುಗಿಯುವ ರೇಷನ್ ಕಾರ್ಡ್ ವಿತರಣೆಗೆ ಮಾಡದಂತೆ ಸರ್ಕಾರಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ.

ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ ಕುಮಾರ್ ಝಾ, ನಿರ್ಭಂದಗಳ ಕುರಿತು ಮಾಹಿತಿ ನೀಡುತ್ತಾ, ಪಡಿತರ ಚೀಟಿಗಳಿಗೆ ಹೊಸ ಅರ್ಜಿ ಸ್ವೀಕಾರ, ಪಡಿತರ ಚೀಟಿ ವಿತರಣೆ, ಆಧಾರ್ ಕಾರ್ಡ್ ನೋಂದಣಿಯನ್ನು ಚುನಾವಣೆ ಪ್ರಕ್ರಿಯೆಗಳು ಮುಗಿಯುವವರೆಗೂ ನಿರ್ಭಂದಿಸಲಾಗಿದೆ ಎಂದು ಹೇಳಿದರು.

ವಿತರಣೆಗೆ ಸಿದ್ಧವಾಗಿರುವ ಪಡಿತರ ಚೀಟಿಗಳನ್ನು ವಿತರಿಸುವ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆಯೋಗಕ್ಕೆ ದೂರು ಬಂದಿತ್ತು. ಇದನ್ನು ಪರಿಶೀಲಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪಡಿತರ ಚೀಟಿ ವಿತರಣೆ, ಹೊಸ ಅರ್ಜಿಗಳ ಹಂಚಿಕೆ ಮುಂತಾದ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿಲಾಗಿದೆ ಎಂದರು.

ಆಧಾರ್ ಕಾರ್ಡ್ : ಚುನಾಯಿತ ಪ್ರತಿನಿಧಿಗಳು, ಪಾಲಿಕೆ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ನಡೆಯುತ್ತಿರುವ ಇಂತಹ ನೋಂದಣಿ ಪ್ರಕ್ರಿಯೆ ನಿರ್ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಅಂಚೆ ಕಚೇರಿ, ಪಾಲಿಕೆ ಕಚೇರಿಗಳಲ್ಲಿ ನಡೆಯುತ್ತಿದ್ದ ಆಧಾರ್ ನೋಂದಣಿ ಪ್ರಕ್ರಿಯೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ಭದ್ರತಾ ಯೋಜನೆ ವ್ಯಾಪ್ತಿಯ ವಿಧವಾ ವೇತನ, ವಿಕಲಚೇತನ ವೇತನ, ವೃದ್ಧಾಪ್ಯವೇತನಕ್ಕಾಗಿ ಹೊಸದಾಗಿ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಿದವರನ್ನು ಪಟ್ಟಿಗೆ ಸೇರಿಸಲು ಆಯೋಗ ನಿರ್ಬಂಧ ವಿಧಿಸಿದೆ.

ಭೂದಾನ ಪ್ರಕ್ರಿಯೆ, ಭೂ ಪರಿವರ್ತನೆಯಂತಹ ಕ್ರಮಗಳು ನೀತಿ ಸಂಹಿತೆ ವ್ಯಾಪ್ತಿಗೆ ಸೇರಲಿವೆ. ಚುನಾವಣೆ ಮುಗಿಯುವರೆಗೆ ಯಾವುದೇ ಜಿಲ್ಲಾಧಿಕಾರಿಗಳು ಭೂ ಪರಿವರ್ತನೆ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ವೆಬ್ ಸೈಟ್ ಗೆ ನಿರ್ಭಂದ : ಸರ್ಕಾರದ ವಿವಿಧ ಇಲಾಖೆಗಳ ವೆಬ್‌ಸೈಟ್‌ನಲ್ಲಿ ನಿರ್ಧಿಷ್ಟ ಪಕ್ಷವೊಂದು ಇಂತಹ ಯೋಜನೆ ಜಾರಿಗೊಳಿಸಿದೆ ಎಂಬ ಮಾಹಿತಿಗಳಿವೆ. ಈ ಹಿನ್ನೆಲೆಯಲ್ಲಿ ಸರಕಾರ ಸಾಧನೆ ಬಿಂಬಿಸುವ ವೆಬ್‌ಸೈಟ್‌ಗಳನ್ನು ಸ್ಥಗಿತಗೊಳಿಸಿ, ಇಲಾಖೆಗೆ ಸಂಬಂಧಿಸಿದ ಸಚಿವರ ಭಾವಚಿತ್ರ ತೆಗೆಯಲು ಆದೇಶಿಸಲಾಗಿದೆ ಎಂದು ಹೇಳಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+