ಶುಕ್ರವಾರದ ಪ್ರಮುಖ ರಾಜಕೀಯ ಬೆಳವಣಿಗೆಗಳು

ಹಿರಿಯ ಸಾಹಿತಿ ಚಂಪಾ ಶುಕ್ರವಾರ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿನ ನೆಲ, ಜಲದ ಹಿತ ಕಾಪಾಡಲು ಜಾತ್ಯತೀತ ಪಕ್ಷಕ್ಕೆ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದೇನೆ. ಆದ್ದರಿಂದ ಕೆಜೆಪಿ ಸೇರುತ್ತಿರುವುದಾಗಿ ತಿಳಿಸಿದರು.
ನಿವೃತ್ತಿ : ಕಡೂರು ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಡಾ.ವಿಶ್ವನಾಥ್ ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದರು. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂಸದರ ವಿರುದ್ಧ ಕ್ರಮ : ಬಿಜೆಪಿ ಸಂಸದರಾಗಿದ್ದು, ಕೆಜೆಪಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಶೀಘ್ರದಲ್ಲೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಇನ್ನೂ ಗೊಂದಲ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಗೊಳಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದೆಹಲಿಗೆ ತೆರಳಿದ್ದಾರೆ. ಸೋನಿಯಾ ಗಾಂಧಿ ದೆಹಲಿಗೆ ಬರುವಂತೆ ಕೃಷ್ಣಗೆ ಸೂಚಿಸಿದ್ದರು.
ಕೆಜೆಪಿಗೆ ಹೋಗೋಲ್ಲ ಕತ್ತಿ : ಕೃಷಿ ಸಚಿವ ಉಮೇಶ್ ಕತ್ತಿ ಕೆಜೆಪಿ ಸೇರುವುದಿಲ್ಲ. ಬಿಜೆಪಿಯಿಂದಲೇ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ರೇಣುಕಾಚಾರ್ಯ ಕೆಜೆಪಿಗೆ : ಬಿಜೆಪಿಯಿಂದ ಉಚ್ಚಾಟಣೆಗೊಂಡಿರುವ ಅಬಕಾರಿ ಸಚಿವ ಕೆಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಕೆಜೆಪಿ ಸೇರುವುದು ನಿಶ್ಚಿತ ಎಂದು ಹೇಳಿದ್ದಾರೆ. ಅಚ್ಚರಿ ಎಂಬಂತೆ ರೇಣುಕಾಚಾರ್ಯ ಕೆಜೆಪಿ ಸೇರುವ ಕುರಿತು ಯಾವ ಮಾಹಿತಿಯೂ ಇಲ್ಲ ಎಂದು ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಸಿ.ಸಿ.ಪಾಟೀಲ್ ಬೆಂಗಳೂರಿಗೆ : ಗನ್ ಮ್ಯಾನ್ ನಿಂದ ಆಕಸ್ಮಿವಾಗಿ ಗುಂಡು ತಗುಲಿ ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನರಗುಂದ ಶಾಸಕ ಸಿ.ಸಿ.ಪಾಟೀಲ್ ಆರೋಗ್ಯದಲ್ಲಿ ಏರು-ಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿದೆ.
ಇವುಗಳನ್ನು ಓದಿ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications