ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿ ತಯಾರು

ಶನಿವಾರ ರಾಜ್ಯ ಚುನಾವಣಾ ಸಮಿತಿ ಸಭೆ ಬಳಿಕ ಮಾತನಾಡಿದ ಸಿ.ಟಿ.ರವಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಅಡ್ವಾಣಿ, ರಾಜನಾಥ್ ಸಿಂಗ್ ಏ.8ರಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಏಪ್ರಿಲ್ ಮೊದಲ ವಾರದಲ್ಲಿ ಸಭೆ ಸೇರಲಿದ್ದು, ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು. ಟಿಕೆಟ್ ಹಂಚಿಕೆ ಗೊಂದಲ ತಪ್ಪಿಸಲು ಒಂದು ಕ್ಷೇತ್ರದಿಂದ ಒಬ್ಬ ಅಭ್ಯರ್ಥಿಯ ಹೆಸರನ್ನು ಮಾತ್ರ ಕೇಂದ್ರ ಸಮಿತಿಗೆ ಕಳುಹಿಸಿಕೊಡಲಾಗುತ್ತದೆ ಎಂದು ತಿಳಿಸಿದರು.
ಕೈ ಕಚ್ಚಾಟ ಸಹಜ : ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್ ನಲ್ಲಿ ಯಾವುದೇ ಒಮ್ಮತ ಮೂಡಿಲ್ಲ. ಕಾಂಗ್ರೆಸ್ ನ ಕೆಲವು ನಾಯಕರು ಮಾನವ ಬಾಂಬರ್ ಗಳಿದ್ದಂತೆ ಟಿಕೆಟ್ ದೊರಯದಿದ್ದರೆ ಸ್ಪೋಟಗೊಳ್ಳುತ್ತಾರೆ. ಆದ್ದರಿಂದ ಗೊಂದಲ ಉಂಟಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ಕೆಜೆಪಿ ವಿರುದ್ಧ ಪ್ರತಿತಂತ್ರ :ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಯಾವುದೇ ಗೊಂದಲ ಉಂಟಾಗಿಲ್ಲ. ಕೆಜೆಪಿ ಅಭ್ಯರ್ಥಿಗಳ ವಿರುದ್ಧ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಲು ಪ್ರತ್ಯೇಕ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿಯ ಸಂದಸರಾಗಿ ಕೆಜೆಪಿ ಪರವಾಗಿ ಕೆಲಸ ಮಾಡುತ್ತಿರುವ ಶಿವಮೊಗ್ಗ ಸಂಸದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಶೀಘ್ರದಲ್ಲೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ವರಿಷ್ಠರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.
ಆಡಳಿತ ವಿರೋಧಿ ಅಲೆಯನ್ನು ಮೀರಿ ಅಧಿಕಾರ ಪಡೆಯುವ ಉತ್ಸಾಹದಲ್ಲಿರುವ ಬಿಜೆಪಿ ಚುನಾವಣೆಗೆ ರಣ ತಂತ್ರ ರೂಪಿಸುತ್ತಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆದ ನಂತರ ಬಿಜೆಪಿಯ ಮುಂದಿನ ಕಾರ್ಯತಂತ್ರ ಏನು ಎಂಬುದು ತಿಳಿಯಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications