ಬಿಎಸ್ ವೈ ಜೈಲಿಗೆ ಕಳಿಸಿದ್ದು ಬಿಜೆಪಿಯಲ್ಲ : ಈಶ್ವರಪ್ಪ

K.S.Eshwarappa
ಬಳ್ಳಾರಿ, ಏ.1 : ಬಿಜೆಪಿ ಪಕ್ಷ ಅಥವ ನಾನು ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿಲ್ಲ. ಅವರ ಕುಟುಂಬದವರು ಮಾಡಿದ ತಪ್ಪಿನಿಂದಾಗಿ ಯಡಿಯೂರಪ್ಪ ಜೈಲಿಗೆ ಹೋದರು. ಈ ಬಗ್ಗೆ ಯಾವ ದೇವರ ಮುಂದೆ ಬೇಕಾದರೂ ಪ್ರಮಾಣ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸೋಮವಾರ ಬಳ್ಳಾರಿಗೆ ಆಗಮಿಸಿದ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸಿದರು ಎಂಬ ಯಡಿಯೂರಪ್ಪ ಮಾತಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಇಂತಹ ಹೇಳಿಕೆ ನೀಡಿ ಅವರು ಜನರ ಅನುಕಂಪ ಪಡೆಯಲು ಯತ್ನಿಸುದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಮಕ್ಕಳು ಮಾಡಿದ ತಪ್ಪಿನಿಂದಾಗಿ ಅವರು ಶಿಕ್ಷೆ ಅನುಭವಿಸಿದರು. ಅದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾನು ಅವರನ್ನು ಜೈಲಿಗೆ ಕಳುಹಿಸಿಲ್ಲ ಎಂದರು. ಈ ಕುರಿತು ಯಾವ ದೇವರ ಮುಂದೆ ಬೇಕಾದರೂ ನಾನು ಪ್ರಮಾಣ ಮಾಡುತ್ತೇನೆ ಎಂದು ಹೇಳಿದರು.

ಏಪ್ರಿಲ್ 5 ಕ್ಕೆ ಪಟ್ಟಿ : ವಿಧಾನಸಭೆ ಚುನಾವಣೆಗಾಗಿ 170 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏ.5ರಂದು ಸಂಜೆ ಬಿಡುಗಡೆ ಮಾಡಲಿದ್ದೇವೆ ಎಂದು ಈಶ್ವರಪ್ಪ ಹೇಳಿದರು. ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿಯನ್ನು ಕಳುಹಿಸಲಾಗಿದೆ. ಏ.5ರಂದು ಚುನಾವಣಾ ಸಮಿತಿ ಸಭೆಯಿದ್ದು, ಅಂದು ಸಂಜೆ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಒಟ್ಟು ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಲಾಭಿ ನಡೆದಿಲ್ಲ: ಟಿಕೆಟ್ ಗಾಗಿ ಪಕ್ಷದಲ್ಲಿ ಯಾವುದೇ ಲಾಬಿ ನಡೆದಿಲ್ಲ. ದೆಹಲಿಗೆ ಹೋಗಿ ಟಿಕೆಟ್ ನೀಡುವಂತೆ ಲಾಬಿ ನಡೆಸುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಅವರು ವ್ಯಂಗ್ಯವಾಡಿದರು. ಹಾಲಿ ಶಾಸಕರಿಗೆ ಮತ್ತು ಸಚಿವರಿಗೆ ಟಿಕೆಟ್ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಹುಮತ ನಿಶ್ಚಿತ : ಬಿಜೆಪಿಯ ಸಾಧನೆಯನ್ನು ಗಮನಿಸಿ ಚುನಾವಣೆಯಲ್ಲಿ ಮತದಾರರು ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಲಿದ್ದಾರೆ. ಭ್ರಷ್ಟರು, ಜಗಳಕೋರರು ಈಗ ಪಕ್ಷ ತೊರೆದಿದ್ದು, ಜನರು ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನಡೆಸಲು ಅವಕಾಶ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. (ಬಳ್ಳಾರಿ ಬಿರು ಬಿಸಿಲಿನ ಕ್ಷೇತ್ರ ಪರಿಚಯ)

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+