ಕಾಂಗ್ರೆಸ್ ಪಟ್ಟಿ ಅಂತಿಮ : ಬಿಡುಗಡೆ ಯಾವಾಗ?

Congress
ಬೆಂಗಳೂರು, ಏ.1 : ಕಳೆದ ಕೆಲವು ದಿನಗಳ ಕಸರತ್ತಿನ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ಅಸಮಾಧಾನಕ್ಕೆ ಅವಕಾಶ ನೀಡದಂತೆ ಮೂರು ಹಂತಗಳಲ್ಲಿ ಪಟ್ಟಿ ಬಿಡುಗಡೆ ಮಾಡಲು ವರಿಷ್ಠರು ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಪಕ್ಷ ನಾಯಕ ಸಿದ್ದರಾಯಮಯ್ಯ ಬೆಂಗಳೂರಿಗೆ ಮರಳಿದ್ದಾರೆ.

ಬೆಂಗಳೂರಿಗೆ ಆಗಮಿಸಿ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಅಭ್ಯರ್ಥಿಗಳ ಘೋಷಣೆ ಅಧಿಕೃತವಾಗಿ ಆಗದಿದ್ದರೂ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಇಂದಿನಿಂದಲೇ ಪ್ರಚಾರ ಕಾರ್ಯ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಪಟ್ಟಿಯನ್ನು ಮೂರು ವಿಧಗಳಲ್ಲಿ ವಿಂಗಡಿಸಲಾಗಿದ್ದು, ಹಾಲಿ ಶಾಸಕರು ಮತ್ತು ಒಬ್ಬರೇ ಆಕಾಂಕ್ಷಿಗಳ ಮೊದಲ ಪಟ್ಟಿ ಎರಡು ದಿನಗಳಲ್ಲಿ ಬಿಡುಗಡೆ ಆಗಲಿದೆ. ಏಪ್ರಿಲ್ ಎರಡನೇ ವಾರ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸುಮಾರು 30 ರಿಂದ 40 ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮ ಪಟ್ಟಿ ಏಪ್ರಿಲ್ 10ರೊಳಗೆ ಪ್ರಕಟವಾಗಲಿದೆ. ಯಾರಿಗೆ ಟಿಕೆಟ್ ನೀಡಿದರೂ, ಬಂಡಾಯ ಸ್ಫೋಟಗೊಳ್ಳುವ ಕ್ಷೇತ್ರಗಳ ಪಟ್ಟಿ ಅಂತಿಮವಾಗಿ ಬಿಡುಗಡೆಯಾಗಲಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ವಲಸಿಗರಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳೆಯರಿಗೆ 12 ಸೀಟು : ಸೋನಿಯಾಗಾಂಧಿ ಆದೇಶದಂತೆ ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಆದ್ಯತೆ ನೀಡಲಾಗಿದೆ. ರಾಣಿ ಸತೀಶ್, ಮಂಜುಳಾ ನಾಯ್ಡು, ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ ಸೇರಿದಂತೆ 12 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಪ್ರಣಾಳಿಕೆ ಸಿದ್ಧ : ಎಲ್ಲಾ ವರ್ಗ, ಪ್ರದೇಶದ ಜನರಿಗೂ ಸಮಾನ ಆದ್ಯತೆ ನೀಡುವ ಚುನಾವಣಾ ಪ್ರಣಾಳಿಕೆಯನ್ನು ರಮೇಶ್ ಕುಮಾರ್ ಅಧ್ಯಕ್ಷತೆಯ ಸಮಿತಿ ಸಿದ್ಧಗೊಳಿಸಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಕೃಷಿ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪಟ್ಟಿ ಮಾಡಿ ಅವುಗಳನ್ನು ಪರಿಹರಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಎಂದರು.

ಒಟ್ಟಾರೆ ತೀವ್ರ ಕಸರತ್ತಿನ ನಂತರ ಕಾಂಗ್ರೆಸ್ ಪಟ್ಟಿ ಸಿದ್ಧಗೊಳಿಸಿ ಪರಮೇಶ್ವರ್ ಮತ್ತು ಸಿದ್ದರಾಮಯ್ಯ ರಾಜ್ಯಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಂತಿಮ ಒಪ್ಪಿಗೆಯ ನಂತರ ಪಟ್ಟಿ ಬಿಡುಗಡೆ ಆಗಲಿದೆ. ಇಂದಿನಿಂದ ಕಾಂಗ್ರೆಸ್ ಪ್ರಚಾರ ಕಾರ್ಯ ಆರಂಭಿಸುವ ಸಾಧ್ಯತೆ ಇದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+