ಸೋಮವಾರದ ಪ್ರಮುಖ ರಾಜಕೀಯ ಸುದ್ದಿಗಳು

ಪಕ್ಷಾಂತರಿಗಳಿಗೆ ಅವಕಾಶ ನೀಡಬಾರದು. ಮೂಲ ಕಾಂಗ್ರೆಸಿಗರಿಗೆ ಆದ್ಯತೆ ನೀಡಬೇಕು ಎಂದು ಸೋಮವಾರ ಬೆಳಗ್ಗೆ ಕೆಪಿಸಿಸಿ ಕಚೇರಿ ಬಳಿ ಶ್ರವಣಬೆಳಗೊಳದಿಂದ ಆಗಮಿಸಿದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೆಡಿಎಸ್ ತೊರೆದು ಕೈ ಹಿಡಿದಿರುವ ಸಿ.ಎಸ್.ಪುಟ್ಟೇಗೌಡರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ಅವರಿಗೆ ಟಿಕೆಟ್ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸುಮಾರು 40 ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಕಾಣಿಸಿಕೊಂಡಿದ್ದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡ ನಂತರ ಪ್ರತಿಭಟನೆ ಕಾವು ಹೆಚ್ಚಾಗುವ ಸಂಭವಿದೆ.
ಬಿಎಸ್ಆರ್ ಜೊತೆ ಮೈತ್ರಿ ಇಲ್ಲ :ವಿಧಾನಸಭೆ ಚುನಾವಣೆಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಬಿಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಶ್ರೀರಾಮುಲು ಹೇಳಿದ್ದರು.
ಬಿಜೆಪಿಯಲ್ಲೂ ಬಂಡಾಯ : ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಯುವಕರಿಗೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಯವ ಘಟಕ ವಿಸರ್ಜಿಸಲು ತೀರ್ಮಾನಿಸಲಾಗಿದೆ.
ಗೊಂದಲವಿಲ್ಲ : ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳಿಲ್ಲ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತುಮಕೂರಿನಲ್ಲಿ ಹೇಳಿದ್ದಾರೆ.
ನಯವಂಚಕರು : ಉಮೇಶ್ ಕತ್ತಿ, ವಿ.ಸೋಮಣ್ಣ ಮುಂತಾದವರು ಕೆಜೆಪಿಗೆ ಬರುತ್ತೇನೆ ಎಂದು ಹೇಳಿ ವಂಚಿಸಿದ್ದಾರೆ. ಅವರು ನಯವಂಚಕರು ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಶಿವರಾಜ್ ಸಜ್ಜನ್ ಹೇಳಿದ್ದಾರೆ.
ಇವುಗಳನ್ನು ಓದಿ..
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications