ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡ್ಡಮತ ಹಾಕಿದವರಿಗೆ ಟಿಕೆಟ್ : ಸುದರ್ಶನ್ ಕಿಡಿ

By Prasad
|
Google Oneindia Kannada News

Cross voting : Sudarshan letter to KPCC
ಬೆಂಗಳೂರು, ಏ. 2 : ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಕಾಂಗ್ರೆಸ್ಸನ್ನು ಸೋಲಿಸಲು ಕಾರಣರಾದ ಸದಸ್ಯರಿಗೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂದು ಮಾಜಿ ಸಭಾಧ್ಯಕ್ಷ ವಿ.ಆರ್. ಸುದರ್ಶನ್ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೆ ಮಂಗಳವಾರ ಸುದೀರ್ಘ ಪತ್ರ ಬರೆದಿದ್ದಾರೆ.

ಈ ಕುರಿತಂತೆ ವರದಿ ನೀಡಬೇಕೆಂದು ಎಐಸಿಸಿ ಸತ್ಯ ಶೋಧನಾ ಸಮಿತಿಯ ಅಧ್ಯಕ್ಷರಾಗಿರುವ ಸುದರ್ಶನ್ ಅವರಿಗೆ ಆದೇಶ ನೀಡಿತ್ತು. ಅವರು ವರದಿ ಸಲ್ಲಿಸಿದ್ದರೂ, ಅಡ್ಡಮತದಾನ ಮಾಡಿದವರಿಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲು ಹುನ್ನಾರ ನಡೆಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆಯ ವೇಮಗಲ್‌ನ ಸುದರ್ಶನ್ ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಹಂಚಿಕೆ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಕಗ್ಗಂಟಾಗಿ ಪರಿಣಮಿಸಿದೆ. ಕೆಲವರಿಗೆ ಟಿಕೆಟ್ ನೀಡಲೇಬೇಕು ಎಂದು ಆಗ್ರಹಿಸುವವರದು ಒಂದು ಗುಂಪಾದರೆ, ಇಂಥವರಿಗೆ ಟಿಕೆಟ್ ನೀಡಲೇಬಾರದು ಎಂದು ಮತ್ತೊಂದು ಗುಂಪು ಪ್ರತಿಭಟನೆ ನಡೆಸುತ್ತಿದೆ. 224 ಕ್ಷೇತ್ರಗಳಲ್ಲಿ 170 ಕ್ಷೇತ್ರಗಳಿಗೆ ಟಿಕೆಟ್ ನೀಡುವುದು ನಿರ್ಧಾರವಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈಗಾಗಲೆ ಯಶವಂತಪುರ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್, ಚಂದಾಪುರ ಕ್ಷೇತ್ರಗಳಲ್ಲಿ ತಮ್ಮ ಗುಂಪಿನ ಅಭ್ಯರ್ಥಿಗೇ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ಕೆಪಿಸಿಸಿ ಕಚೇರಿಯ ಮುಂದೆ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜರಾಜೇಶ್ವರಿ ನಗರ ಮತ್ತು ಹೆಬ್ಬಾಳ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸುದರ್ಶನ್ ಅವರು ಜಯನಗರ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಿ.ಎನ್. ವಿಜಯ್ ಕುಮಾರ್ ಅವರು ಸ್ಪರ್ಧಿಸುತ್ತಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Karnataka assembly election : Former assembly chairman V.R. Sudarshan of Congress has written a letter to KPCC president Dr. G. Parameshwar not to issue tickets to those who cross voted during upper house election. Sudarshan is asking ticket to himself from Jayanagar, Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X