ಮಂಗಳವಾರದ ಪ್ರಮುಖ ರಾಜಕೀಯ ಸುದ್ದಿಗಳು

ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಗೊಂದಲ ಮುಂದುವರೆದಿದ್ದು, ಯಶವಂತಪುರ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್, ಚಂದಾಪುರ ಮುಂತಾದ ಕ್ಷೇತ್ರಗಳ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನೆಡೆಸಿದರು. ಬುಧವಾರ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ನಡೆಯಲಿದೆ.
ಬಿಜೆಪಿ : ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬಿಜೆಪಿಯಲ್ಲಿಯೇ ಉಳಿಯಲಿದ್ದಾರೆ ಎಂದು ಸಿಎಂ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ ಘೋಷಿಸಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ ಕೆಜೆಪಿಗೆ ಸೇರಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ : ಜೆಡಿಎಸ್ ನೊಂದಿಗಿನ ಮೈತ್ರಿ ಮರಿದು ಬಿದ್ದ ತಕ್ಷಣ, ಬಿಎಸ್ಆರ್ ಕಾಂಗ್ರೆಸ್ 18 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಜೆಡಿಎಸ್ ನೊಂದಿಗೆ ಸದ್ಯಕ್ಕೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕೇಳಿದ್ದಾರೆ. ಚಾಮರಾಜ ನಗರ ಕ್ಷೇತ್ರದಲ್ಲಿ ವಾಟಾಳ್ ನಾಗರಾಜ್ ವಿರುದ್ಧ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಇರಲು ನಿರ್ಧರಿಸಲಾಗಿದೆ.
ಇನ್ನೊಂದು ಚಾನ್ಸ್ ಇದೆ : ಬಿಜೆಪಿಯಲ್ಲಿದ್ದ ಭ್ರಷ್ಟರೆಲ್ಲಾ ಪಕ್ಷ ತೊರೆದಿದ್ದು, ಬಿಜೆಪಿ ಈಗ ಸ್ವಚ್ಚವಾಗಿದ್ದು, ಮತರಾರರು ತಮಗೆ ಮತ್ತೊಂದು ಅವಕಾಶ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಯೋಗದ ಹದ್ದಿನ ಕಣ್ಣು : ವಿಧಾನಸಭೆ ಚುನಾವಣೆಗೆ 224 ಕ್ಷೇತ್ರಗಳಿಗೆ 344 ವೀಕ್ಷರನ್ನು ನೇಮಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಯಾವುದೇ ಅಕ್ರಮಗಳು ನಡೆಯದಂತೆ ನ್ಯಾಯ ಸಮ್ಮತ ಚುನಾವಣೆ ನಡೆಸಲು ಆಯೋಗ ಸಜ್ಜಾಗಿದೆ. ಕೋಲಾರದ ಚಿಂತಾಮಣಿ ಕ್ಷೇತ್ರವನ್ನು ಅತಿಸೂಕ್ಮ ಪ್ರದೇಶ ಎಂದು ಘೋಷಿಸಿಲಾಗಿದ್ದು, ಮಹಾರಾಷ್ಟ್ರದಿಂದ ಕೇಂದ್ರಿಯ ಭದ್ರತಾ ಪಡೆಗಳನ್ನು ಕರೆಸಲಾಗಿದೆ.
ಸಿದ್ದು ಕಿಡ್ನಿಲಿ ಕಲ್ಲು : ಸೋಮವಾರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡ್ನಿಯಲ್ಲಿ ಕಲ್ಲು ಪತ್ತೆಯಾಗಿದೆ. ಲೇಸರ್ ಚಿಕಿತ್ಸೆ ಮೂಲಕ ಕಲ್ಲು ಕರಸಿಸಬಹುದ. ಅಗತ್ಯವಿದ್ದರೆ ಸಣ್ಣ ಶಸ್ತ್ರ ಚಿಕಿತ್ಸೆ ನಡೆಸುತ್ತೇವೆ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications