ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ವರ್ಗಾವಣೆ

ಬುಧವಾರ ಮಧ್ಯಾಹ್ನ ಚುನಾವಣಾ ಆಯೋಗದ ನಿರ್ದೇಶನದಂತೆ ಆದೇಶ ಹೊರಡಿಸಿರುವ ಸರ್ಕಾರ, ಜ್ಯೋತಿ ಪ್ರಕಾಶ್ ಮಿರ್ಜಿಯವರನ್ನು ವರ್ಗಾವಣೆಗೊಳಿಸಿದೆ. ಮಿರ್ಜಿ ಅವರ ಸ್ಥಾನಕ್ಕೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಮಿರ್ಜಿ ಅವರನ್ನು ಯಾವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
1986ರಲ್ಲಿ ಪೊಲೀಸ್ ಸೇವೆಗೆ ಸೇರಿದ ರಾಘವೇಂದ್ರ ಅವರು ಶಿವಮೊಗ್ಗ, ಮಂಡ್ಯ, ಗುಲ್ಬರ್ಗಾ, ಗದಗ್ ಮುಂತಾದ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡದ ಪೊಲೀಸ್ ಕಮೀಷನರ್ ಆಗಿದ್ದ ರಾಘವೇಂದ್ರ ಔರಾದ್ಕರ್ 2010ರಿಂದ ಗೃಹ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗಷ್ಟೆ, ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿ ಪದಕ ಪಡೆದಿದ್ದರು.
ಶಿಸ್ತಿನ ಸಿಪಾಯಿ : ಬೀದರ್ ಮೂಲದವರಾದ ರಾಘವೇಂದ್ರ ಔರಾದ್ಕರ್ ಜ್ಯೋತಿ ಪ್ರಕಾಶ್ ಮಿರ್ಜಿ ಅವರಂತೆ ಶಿಸ್ತಿನ ಸಿಪಾಯಿ ಎಂದು ಪೊಲೀಸ್ ವಲಯದಲ್ಲಿ ಹೆಸರುಗಳಿಸಿದ್ದಾರೆ. ಬೆಂಗಳೂರು ನಗರವನ್ನು ಸಮರ್ಥವಾಗಿ ಮುನ್ನೆಡೆಸುವ ಸಾಮರ್ಥ್ಯ ರಾಘವೇಂದ್ರ ಅವರಿಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications