ಬುಧವಾರದ ಎಂಟು ಪ್ರಮುಖ ಸುದ್ದಿಗಳು

ಬಿಎಸ್ಆರ್ ಗೆ ಜಯಲಕ್ಷ್ಮೀ : ಬಿಗ್ ಬಾಸ್ ರಿಯಾಲಿಟಿ ಶೋದಿಂದ ಹೊರಬಂದ ನರ್ಸ್ ಜಯಲಕ್ಷ್ಮೀ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಾಜಕೀಯ ಪ್ರವೇಶಿಸಿದ್ದಾರೆ. ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಸೇರಿರುವ ಜಯಲಕ್ಷ್ಮೀ ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಸಿದ್ದುಗೆ ನಾಳೆ ಆಪರೇಷನ್ : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿಡ್ನಿಯಲ್ಲಿ ಕಲ್ಲು ಪತ್ತೆಯಾಗಿರುವುದರಿಂದ ಗುರುವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಒಂದು ವಾರಗಳ ವಿಶ್ರಾಂತಿ ನಂತರ ಪ್ರಚಾರ ಕಾರ್ಯ ನಡೆಸಬಹುದಾಗಿದೆ.
ಮಿರ್ಜಿ ವರ್ಗಾವಣೆ : ಬೆಂಗಳೂರು ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಘವೇಂದ್ರ ಔರಾದ್ಕರ್ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಪ್ರಾದೇಶಿಕ ಪಕ್ಷಗಳಿಗೆ ಬೆಲೆ ಇಲ್ಲ : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಯಶಸ್ವಿಯಾದ ಉದಾಹಣೆಗಳಿಲ್ಲ ಆದ್ದರಿಂದ ಯಡಿಯೂರಪ್ಪ ನೇತೃತ್ವದ ಕೆಜೆಪಿ ಯಶಸ್ವಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ತಮ್ಮ ಸ್ವರ್ಥ ಸಾಧನೆಗಾಗಿ ಪಕ್ಷ ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಮತ್ತೊಂದು ವಿಕೆಟ್ ಪತನ : ಲಿಂಗಸಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಸೇರುವುದಾಗಿ ಅವರು ಘೋಷಿಸಿದ್ದಾರೆ.
ಕೆಪಿಸಿಸಿ ಮುಂದೆ ಇಂದು ಪ್ರತಿಭಟನೆ : ಸರ್.ಸಿ.ವಿ.ರಾಮನ್ ನಗರ, ಚಾಮರಾಜಪೇಟೆ, ಯಶವಂತಪುರ ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರು ಟಿಕೆಟ್ ನೀಡುವಂತೆ ಒತ್ತಾಯಿಸಿ ಬುಧವಾರವೂ ಕೆಪಿಸಿಸಿ ಕಚೇರಿ ಎದರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮಧ್ಯಯೇ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಸಭೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು.
ಕೈಗಡಿಯಾರ ವಶ : ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಕೈಗಡಿಯಾರವನ್ನು ಚುನಾವಣಾಧಿಕಾರಿ ಮಾರ್ಕಂಡೇಯ ವಶಪಡಿಸಿಕೊಂಡರು. ಯಾವ ಪಕ್ಷದ ಅಭ್ಯರ್ಥಿಗೆ ಸೇರಿದ ವಾಚುಗಳು ಎಂದು ತಿಳಿದುಬಂದಿಲ್ಲ.
ಸ್ಟಾರ್ ಪ್ರಚಾರಕರು ಬೇಡ : ಜೆಡಿಎಸ್ ಅಭ್ಯರ್ಥಿಗಳೇ ಸ್ಟಾರ್ ಪ್ರಚಾರಕರು. ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆ ಇದ್ದು, ಜೆಡಿಎಸ್ ಅಧಿಕಾರ ಪಡೆಯಲಿದೆ ಎಂದು ಹೇಳಿದರು. ಮಾಧ್ಯಮಗಳಲ್ಲಿ ಬರುವ ಚುನಾವಣಾ ಸಮೀಕ್ಷೆ ಸುಳ್ಳಾಗಲಿದೆ. ಜನರ ದಾರಿ ತಪ್ಪಿಸಲು ಇಂತಹ ಸಮೀಕ್ಷೆ ನಡೆಸಲಾಗಿದೆ ಎಂದು ಕಿಡಿ ಕಾರಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications