ಬಿರು ಬಿಸಿಲಿನಲ್ಲಿ ಯಡಿಯೂರಪ್ಪ ಪ್ರವಾಸ ಶುರು
ಬೆಂಗಳೂರು, ಏ.4: ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರದಿಂದ ನಾಲ್ಕು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಮೈಸೂರು, ಹಾಸನ, ಶಿವಮೊಗ್ಗ, ಗುಲ್ಬರ್ಗ, ರಾಯಚೂರು ಹಾಗೂ ಕೊಪ್ಪಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ..4ರ ಬೆಳಗ್ಗೆ 10ಗಂಟೆಗೆ ಇಲ್ಲಿನ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿ ಕಾಪ್ಟರ್ ಮೂಲಕ ಮೈಸೂರಿನ ಕೆಆರ್ ನಗರಕ್ಕೆ ತೆರಳಿದ್ದು, ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಅಲ್ಲಿಂದ ನಂತರ ಎಚ್‌ಡಿ ಕೋಟೆ, ಟಿ.ನರಸೀಪುರದಲ್ಲಿ ಪ್ರವಾಸ ನಡೆಸಲಿದ್ದಾರೆ. ಮಧ್ಯಾಹ್ನ ಟಿ.ನರಸೀಪುರದಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆ ಅರಸೀಕೆರೆಗೆ ಬರಲಿದ್ದು, ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಏ.5 ರಂದು ಗುಲ್ಬರ್ಗ ಅಫ್ಜಲಪುರ, ಜೇವರ್ಗಿ, ಶಹಾಬಾದ್, ಏ.6ರಂದು ರಾಯಚೂರು ಜಿಲ್ಲೆಯ ಮಾನ್ವಿ, ಮಸ್ಕಿ ಹಾಗೂ ಕೊಪ್ಪಳದ ಕನಕಗಿರಿ, ಗಂಗಾವತಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದು, ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕ್ರೈಸ್ತ ಮುಖಂಡರ ಸಭೆ: ಏ.7ರಂದು ನಗರ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಲಾಗಿರುವ ಕ್ರೈಸ್ತ ಮುಖಂಡರ ಸಭೆಯಲ್ಲಿ ಬಿಎಸ್‌ವೈ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಅದೇ ದಿನ ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂನ ಕೆಜೆಪಿ ಕಚೇರಿಯಲ್ಲಿ ನಡೆಯಲಿರುವ ಯುವ ಘಟಕದ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ಕರ್ನಾಟಕ ಜನತಾ ಪಕ್ಷದ ವಕ್ತಾರರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications