ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ ಬೆದರಿಕೆ ಹಾಕಿದ ಮಹಿಳಾ ಕಾಂಗ್ರೆಸ್

|
Google Oneindia Kannada News

Sonia Gandhi
ಬೆಂಗಳೂರು, ಏ.4 :ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆದಿದೆ. ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಸೂಕ್ತ ಸ್ಥಾನ ಮಾನ ನೀಡದಿದ್ದರೆ. ಕೆಪಿಸಿಸಿ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿ ಕೆಪಿಸಿಸಿಯ ಕೆಲವು ಮಹಿಳಾಮಣಿಗಳು ಕಾಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ತಮಗೆ ಟಿಕೆಟ್ ಬೇಕೆಂದು ಪುರುಷ ಅಭ್ಯರ್ಥಿಗಳು ವಿವಿಧ ರೀತಿಯ ಒತ್ತಡ ತಂತ್ರ ಅನುಸರಿಸಿ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದರು. ಈಗ ಕೆಪಿಸಿಸಿಯ ಮಹಿಳಾ ಪದಾಧಿಕಾರಿಗಳು ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಮನ್ವಯ ಸಮಿತಿ ಸದಸ್ಯೆ ವಾಸಂತಿ ಶಿವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಾಜಮ್ಮ, ಚಂದ್ರಕಲಾ, ಚುನಾವಣಾ ಸಮಿತಿ ಸದಸ್ಯೆ ಸುಮಾ ವಸಂತ್, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಬಿ.ಸಿ.ಗೀತಾ, ಜಲಜಾ ನಾಯಕ ರಾಜೀನಾಮೆ ನೀಡುವುದಾಗಿ ಪತ್ರ ಬರೆದಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ 11 ಮಹಿಳೆಯರಿಗೆ ಟಿಕೆಟ್ ನೀಡಲಾಗಿತ್ತು. ಈ ಬಾರಿ ಕೇವಲ 8 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ ಎಂದು ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳೆಯೇ ಅಧ್ಯಕ್ಷೆಯಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಇಂತಹ ಪರಿಸ್ಥಿತಿ ಬರಬಾರದಾಗಿತ್ತು. ಟಿಕೆಟ್ ನೀಡದಿದ್ದರೆ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಮೇಶ್ವರ್ ವಿರುದ್ಧ ಗರಂ : ಕರ್ನಾಟಕದ ಮಹಿಳೆಯರ ನಿಯೋಗ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದಾಗ ಹೆಚ್ಚಿನ ಪ್ರಾತಿನಿಧ್ಯ ನೀಡುವ ಭರವಸೆ ನೀಡಿದ್ದರು. ಆದರೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮಶ್ವರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ಮಹಿಳೆಯರಿಗೆ ಟಿಕೆಟ್ ನೀಡದಂತೆ ವರಿಷ್ಠರಿಗೆ ಸೂಚಿಸಿದ್ದಾರೆ ಎಂದು ಟಿಕೆಟ್ ವಂಚಿತರು ಆರೋಪ ಮಾಡುತ್ತಿದ್ದಾರೆ.

ಮುಂದುವರೆದ ಪ್ರತಿಭಟನೆ : ಹಾವೇರಿ, ರಾಣಿಬೆನ್ನೂರು, ಬೆಂಗಳೂರಿನ ಸಿ.ವಿ.ರಾಮನ್ ನಗರ ಮುಂತಾದ ಕ್ಷೇತ್ರಗಳ ಕಾರ್ಯಕರ್ತರು ಟಿಕೆಟ್ ನೀಡುವಂತೆ ಒತ್ತಾಯಿಸಿ ಕೆಪಿಸಿಸಿ ಕಚೇರಿ ಮುಂದೆ ಬುಧವಾರವು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಮಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಸಮಸ್ಯೆ ಆಲಿಸಿ ಹೈ ಕಮಾಂಡ್ ಗೆ ತಿಳಿಸುವುದಾಗಿ ಭರವಸೆ ನೀಡಿದರು. ಕೆಪಿಸಿಸಿ ಕಚೇರಿ ಕಾರ್ಯಕರ್ತರಿಗೆ ದೇವಾಲಯವಿದ್ದಂತೆ ಇಲ್ಲಿ ಬಂದು ಸಮಸ್ಯೆ ಹೇಳಿಕೊಳ್ಳುವುದು ಸಾಮಾನ್ಯ. ಅದನ್ನು ಬಗೆಹರಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
KPCC womens wings write a letter to Congress president Sonia Gandhi and requesting for ticket. If women's not get majority in ticket distribution women's decided to give resignation to their posts. KPCC womens wing wants ticket one ticket from each dist of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X